ತೂಬಗೆರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ: ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಜನ

ದೇಶ ಹಾಗೂ ಜನರ ಒಳಿತಿಗಾಗಿ ಬಿಜೆಪಿ ಪಕ್ಷ ಕೆಲಸ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರಾದ ನಾವು ಕೂಡ ಪ್ರಾಮಾಣಿಕತೆಯಿಂದ ದೇಶದ ಹಿತಕ್ಕಾಗಿ ದುಡಿಯುತ್ತೇವೆ ಎಂದು ಬಿಜೆಪಿ ಮುಖಂಡ ಪ್ರತಾಪ್ ತಿಳಿಸಿದರು.

ತಾಲ್ಲೂಕಿನ ತೂಬಗೆರೆ‌‌ ಗ್ರಾಮದ ಸಮುದಾಯ ಭವನದಲ್ಲಿ ಬಿಜೆಪಿ ಹೋಬಳಿ ಘಟಕದ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಿ ಮಾತನಾಡಿದ ಅವರು, ಇಡಿ ದೇಶಾದ್ಯಂತ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ನಮ್ಮ ಪಕ್ಷದಿಂದ ರಕ್ತದಾನ ಶಿಬಿರ ಆಯೋಜನೆ ಮಾಡಿ ಯಶಸ್ವಿಯಾಗಿದೆ ಎಂದರು.

ನಂತರ ತೂಬಗೆರೆ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ ಮಾತನಾಡಿ, ದೇಶದ ಸೈನಿಕರನ್ನು ನೆನೆದು ಬಿಜೆಪಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ. 250 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದ್ದು ಈ ರಕ್ತವನ್ನು ಅವಶ್ಯಕತೆ ಇರುವ ರೋಗಿಗಳಿಗೆ ನೀಡಲಾಗುತ್ತದೆ. ಇನ್ನೂ ಮುಂದೆ ಜನರ ಹಿತದೃಷ್ಟಿಯಿಂದ ನಮ್ಮ ಪಕ್ಷದಿಂದ ಒಳ್ಳೆಯ ಕಾರ್ಯಕ್ರಮ ಮಾಡುತ್ತೆವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತೂಬಗೆರೆ ಗ್ರಾ.ಪಂ ಮಾಜಿ ಅಧ್ಯಕ್ಷ ಸುರೇಶ್ ಬಾಬು,ಸದಸ್ಯ ಮುನಿಕೃಷ್ಣಪ್ಪ, ಘಾಟಿ ಗ್ರಾಮಪಂಚಾಯ್ತಿ ಸದಸ್ಯ ವಾಸು,ಬಿಜೆಪಿ ಮುಖಂಡ ಗಂಗರಾಜು,ಯುವ ಮುಖಂಡರಾದ ಸಂತೋಷ್, ಹರ್ಷ,ಶರತ್,ಸುರೇಶ್ , ದಿನೇಶ್ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

2 hours ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

11 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

1 day ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

1 day ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago