ದೊಡ್ಡಬಳ್ಳಾಪುರ: ಇಲ್ಲಿನ ತೂಬಗೆರೆ ಹಲಸು ತನ್ನ ಬಣ್ಣ ವಾಸನೆ ಮತ್ತು ರುಚಿಯಿಂದ ವಿಶೇಷವಾಗಿದ್ದು, ಈಗ ಈ ಭಾಗದ ಎಂಟು ತಳಿಗಳಿಗೆ ರಾಷ್ಟ್ರಮಟ್ಟದಲ್ಲಿ ಪೇಟೆಂಟ್ ಪಡೆದಿವೆ. ಈ ನಿಟ್ಟಿನಲ್ಲಿ ತೂಬಗೆರೆ ಹಲಸು ಬೆಳೆಗಾರರ ಸಂಘ, ಜಿಲ್ಲಾ ತೋಟಗಾರಿಕೆ ಇಲಾಖೆ ಮತ್ತು ಭಾ.ಕೃ.ಅ.ಪ – ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇವರುಗಳ ಸಹಯೋಗದೊಂದಿಗೆ “ಹಕ್ಕು ಸ್ವಾಮ್ಯ ಪ್ರಮಾಣಪತ್ರ ವಿತರಣೆ ಮತ್ತು ಕೃಷಿ – ವಿಜ್ಞಾನಿಗಳೊಂದಿಗೆ” ಸಂವಾದ ಕಾರ್ಯಕ್ರಮ ಜರುಗಿತು.
ಕೇಂದ್ರ ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ‘ಸಸ್ಯ ಪ್ರಭೇದಗಳು ಮತ್ತು ರೈತರ ಹಕ್ಕುಗಳ ಸಂರಕ್ಷಣಾ ಪ್ರಾಧಿಕಾರ’ (ಪಿಪಿವಿಫ್‌ಆರ್‌ಎ) ದಿಂದ ತೂಬಗೆರೆ ಸುತ್ತಮುತ್ತಲಿನ ಎಂಟು ಹಲಸು ತಳಿಗಳಿಗೆ, ಹಲಸಿನ ಹಣ್ಣಿನಲ್ಲೇ ಉತ್ಕೃಷ್ಟ ಎಂದು ಗುರುತಿಸಿರುವ ಹಕ್ಕು ಸ್ವಾಮ್ಯ (ಪೇಟೆಂಟ್) ಪ್ರಮಾಣ ಪತ್ರವನ್ನು ವಿಶ್ರಾಂತ ಕುಲಪತಿ ನಾರಾಯಣಗೌಡ ವಿತರಿಸಿದರು.
ರೈತರಿಗಾಗಿ ‘ಹಲಸಿನ ಸಾಗುವಳಿ ಮತ್ತು ಮಾರುಕಟ್ಟೆ’ ಹಲಸಿನ ಮೌಲ್ಯವರ್ಧಿತ ಪದಾರ್ಥಗಳು ಮತ್ತು ಹಲಸು ಹಚ್ಚುವ ಯಂತ್ರದ ಕುರಿತು ಜಿಕೆವಿಕೆ ವಿಜ್ಞಾನಿ ಡಾ ಶಾಮಲ ಮಾಹಿತಿ ನೀಡಿದರು.
ತೂಬಗೆರೆ ಹಲಸು ಬೆಳೆಗಾರರ ಸಂಘದ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ತೂಬಗೆರೆ ಸೇರಿದಂತೆ ತಾಲೂಕಿನಲ್ಲಿ 1 ಸಾವಿರ ಟನ್ ಹಲಸು ವಹಿವಾಟು ಆಗಿದೆ. ಯಾವುದೇ ರಸ್ತೆ ಪಕ್ಕ ನೋಡಿದರೂ ಹಲಸು ಕಾಣುತ್ತದೆ. ಬೆಂಗಳೂರು ಅಥವಾ ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪ ಎಲ್ಲಾಸೌಲಭ್ಯ ಒಳಗೊಂಡಂತೆ ಹಲಸು ಮಾರುಕಟ್ಟೆ ವ್ಯವಸ್ಥೆ ಮಾಡಿದರೆ ಅನುಕೂಲವಾಗಲಿದೆ ಎಂದರು.
ಪಿಪಿಎಫ್‌ಆರ್‌ಎ ಪೇಟೆಂಟ್ ಪಡೆದ ಹಲಸು ಬೆಳೆಗಾರ ಕೃಷ್ಣಪ್ಪ ಮಾತಾನಾಡಿ, ನಮ್ಮ ಹೊಲದ ಹಲಸಿನ ಹಣ್ಣಿಗೆ ರಾಷ್ಟ್ರ ಮಟ್ಟದ ಮಾನ್ಯತೆ ನೀಡಿರುವುದು ಸಂತಸ ತಂದಿದೆ. ಮುಂದಿನ 18 ವರ್ಷ ಈ ಹಣ್ಣಿನ ತಳಿಯನ್ನು ಬೇರೆ ಯಾರೂ ಬೆಳೆಸಲು ಅವಕಾಶ ಸಿಗುವುದಿಲ್ಲ. ಹಣ್ಣಿನ ಮಾಲೀಕರು ಅನುಮತಿ ನೀಡಿದವರು ಮಾತ್ರ ಸಸಿಗಳನ್ನು ಬೆಳೆಸಿ, ಮಾರಾಟ ಮಾಡಲು ಅವಕಾಶವಿದೆ ಎಂದರು.
ಹಲಸಿನ ಹಣ್ಣಿನಿಂದ ತಯಾರಿಸಿದ ಹಪ್ಪಳ, ಚಿಪ್ಸ್ ನಂತಹ ಉತ್ಪನ್ನಗಳ ಪ್ರದರ್ಶನ ಸಹ ನಡೆಯಿತು.
ಕಾರ್ಯಕ್ರಮದಲ್ಲಿ ಜಿಕೆವಿಕೆ ವಿಜ್ಞಾನಿಗಳಾದ ಡಾ.ಹನುಮಂತರಾಯ, ಡಾ. ಬಾಬು ರೈ, ಡಾ. ಸವಿತಾ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷ್ಮಮ್ಮ ರಾಮಕೃಷ್ಣ, ಸದಸ್ಯ ಕೃಷ್ಣಪ್ಪ (ಕಿಟ್ಟಿ).ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಅಪ್ಪಯ್ಯಣ್ಣ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ತೂಬಗೆರೆ ಹಲಸು ಬೆಳೆಗಾರರ ಸಂಘದ ಅಧ್ಯಕ್ಷ ಸುರೇಶ್, ವಕೀಲ ಪ್ರತಾಪ್, ಮುಖಂಡರಾದ ವೆಂಕಟೇಶ್, ಕನಕದಾಸ, ರವಿಸಿದ್ದಪ್ಪ, ಉದಯ ಆರಾಧ್ಯ, ವಾಸು, ರಂಗಪ್ಪ, ಶ್ರೀಧರ ಮತ್ತಿತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…