ತೂಬಗೆರೆ ಗ್ರಾಮದಲ್ಲಿ ಒಂದೇ ರಾತ್ರಿ ಸರಣಿ ಕಳ್ಳತನ: ಶನಿಮಹಾತ್ಮ ದೇವಾಲಯ ಹಾಗೂ ಖಾಸಗಿ ಶಾಲೆಯಲ್ಲಿ ಕಳ್ಳತನ

ತಾಲೂಕಿನ ತೂಬಗೆರೆಯಲ್ಲಿರುವ ಶನಿಮಹಾತ್ಮ ದೇವಾಲಯದಲ್ಲಿ ರಾತ್ರೋರಾತ್ರಿ ಹುಂಡಿ ಕದ್ದೊಯ್ದ ಕಳ್ಳರು. ಇದರ ಜೊತೆಗೆ ದೇವಸ್ಥಾನ ಪಕ್ಕದಲ್ಲೇ ಇರುವ ಖಾಸಗಿ ಶಾಲೆಯಲ್ಲೂ ಸಹ ಕಳ್ಳತನ ನಡೆದಿದೆ.

ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ದೇವಾಲಯದ ಬಾಗಿಲಿನ ಬೀಗ ಹೊಡೆದು ಭಕ್ತರು ಹಾಕಿರುವ ಕಾಣಿಕೆ ಹಣಕ್ಕಾಗಿ ಆಸೆಪಟ್ಟು ಹುಂಡಿಯನ್ನು ಎಸ್ಕೇಪ್ ಮಾಡಿರುವ ಕಳ್ಳರು.

ಅದೇರೀತಿ ಎಸ್ ಎಲ್ ಆರ್ ಎಸ್ ಶಾಲೆಯ ಪ್ರಾಂಶುಪಾಲರ ಕೊಠಡಿ ಮತ್ತು ಕಚೇರಿಗೆ ಕಳ್ಳರು ನುಗ್ಗಿದ್ದಾರೆ. ಕೊಠಡಿಯಲ್ಲಿದ್ದ ಕಪಾಟುಗಳನ್ನು ದೋಚಿದ ಕಳ್ಳರು ಕಡತಗಳನ್ನು ಎಸೆದಿದ್ದಾರೆ. ಉಪ ಪ್ರಾಂಶುಪಾಲರ ಕೊಠಡಿಯಿಂದ ಸುಮಾರು 15 ಸಾವಿರ ರೂ. ಹಾಗೂ ಮತ್ತೊಂದು ಕೊಠಡಿಯಲ್ಲಿದ್ದ ಸುಮಾರು 6 ಸಾವಿರ ರೂ. ಸೇರಿದಂತೆ ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್‌ಗಳನ್ನು ಸಂಗ್ರಹಿಸಿಟ್ಟಿದ್ದ ಡಿವಿಆರ್ ಬಾಕ್ಸ್‌ನೊಂದಿಗೆ ಪರಾರಿಯಾಗಿದ್ದಾರೆ.

ಇತ್ತೀಚೆಗೆ ತೂಬಗೆರೆ ಹೋಬಳಿಯ ಸುತ್ತಾಮುತ್ತ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ದೂರಿನ‌ ಮೇರೆಗೆ ಗ್ರಾಮಾಂತರ ಠಾಣಾ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

6 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

8 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

8 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

8 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

13 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

14 hours ago