ತೂಬಗೆರೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ

ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗಳಾದ, ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ವಿವಿಧ ಕಾಮಗಾರಿಗಳಿಗೆ ಅಂತುಇಂತು ಚಾಲನೆ ದೊರಕಿತು.

ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ

ತೂಬಗೆರೆಯಿಂದ ದೊಡ್ಡಬಳ್ಳಾಪುರ ನಗರ, ಬೆಂಗಳೂರಿಗೆ ಪ್ರತಿನಿತ್ಯ ನೂರಾರು ಮಂದಿ ಓಡಾಡುತ್ತಾರೆ. ಸೂಕ್ತ ಸಮಯಕ್ಕೆ ಸಾರಿಗೆ ಬಸ್ ಸೌಲಭ್ಯ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು. ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಈ ಹಿನ್ನೆಲೆ ಇತ್ತೀಚೆಗೆ ಬಿಎಂಟಿಸಿ ಬಸ್ ಸೇವೆಗೆ ಚಾಲನೆ ನೀಡಲಾಗಿತ್ತು. ಇಂದು ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಗೆ ಹಸಿರು ನಿಶಾನೆ ನೀಡಿ ಪ್ರಯಾಣಿಕರಿಗೆ ಅನುಕೂಲ‌ ಮಾಡಲಾಯಿತು.

ತೂಬಗೆರೆ, ಹಾಡೋನಹಳ್ಳಿ, ಕಂಟನಕುಂಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ನಗರಕ್ಕೆ ಬಸ್ ಸೇವೆ ಇರುತ್ತದೆ.

10 ಐಮಾಸ್ಟ್ ದೀಪಗಳಿಗೆ  ಚಾಲನೆ:

ತೂಬಗೆರೆಯ ಹೋಳಿಯ ಪ್ರಮುಖ ರಸ್ತೆ, ಬಸ್ ನಿಲ್ದಾಣಗಳಲ್ಲಿ ಜಿ.ಪಂ ವತಿಯಿಂದ ಹತ್ತು ಲಕ್ಷ ವೆಚ್ಚದ 10 ಐಮಾಸ್ಟ್ ದೀಪಗಳಿಗೆ ಚಾಲನೆ ದೊರಕಿತು.

ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ಕುಡಿಯುವ ನೀರಿಗೆ ತೂಬಗೆರೆ ಹೋಬಳಿಯಲ್ಲಿ ಸಾಕಷ್ಟು ದೂರಗಳು ಕೇಳಿಬಂದ ಹಿನ್ನಲೆಯಲ್ಲಿ ಸಚಿವರ ಅನುಮತಿ ಮೇರೆಗೆ ಖಾಸಗಿ ಸಹಭಾಗಿತ್ವದಲ್ಲಿ ಕುಡಿಯುವ ನೀರಿನ ಘಟಕವಾದ ಆರ.ಓ ಪ್ಲಾಂಟ್ ಗೆ ಚಾಲನೆ ನೀಡಲಾಯಿತು.

ಈ ವೇಳೆ ಕೆಪಿಸಿಸಿ ಸದಸ್ಯ ಮುನಿರಾಜು ಮಾತನಾಡಿ,  ಹೋಬಳಿಯ ಜನರಿಗೆ ಅನುಕೂಲವಾಗುವಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿಲಾಗಿದೆ. ಸಚಿವರು ಬಸ್ ಸೇವೆ ಒದಗಿಸುವ ಮೂಲಕ ಬುಹುದಿನಗಳಿಂದ ಬೇಡಿಕೆಯಿದ್ದ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ವಿವಿಧ ಕಾಮಗಾರಿಗಳನ್ನು ಕೈಗೆತ್ತುಕೊಳ್ಳುವ ಮೂಲಕ  ಹೋಬಳಿಯ ಅಭಿವೃದ್ದಿಗೆ ಶ್ರಮಿಸಲಾಗುವುದು ಎಂದು  ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ ಮಾತನಾಡಿ, ಸಚಿವರು  ಪ್ರತಿಯೊಂದು ಗ್ರಾಮದ ಸಮಸ್ಯೆಗಳನ್ನು ಸ್ಥಳೀಯ ಜನ ಪ್ರತಿನಿಧಿಗಳ ಸಭೆ ನಡೆಸುವ ಮೂಲಕ ಆಲಿಸಿದ್ದು. ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದ್ದಾರೆ. ಅದರಂತೆಯೇ  ಇಂದು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದರು.

ಈ ವೇಳೆ ಜಿ.ಪಂ ಮಾಜಿ ಸದಸ್ಯ ಎನ್, ಅರವಿಂದ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ಸಿದ್ದಪ್ಪ, ಗ್ರಾ.ಪಂ ಸದಸ್ಯರಾದ ಟಿ.ವಿ‌ವೆಂಕಟೇಶ್, ಮುನಿಕೃಷ್ಣಪ್ಪ. ಕಾಂಗ್ರೆಸ್ ಮುಖಂಡರಾದ ಅಂಜಿಪ್ಪ ಸೇರಿದಂತೆ ಇತರರು  ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

4 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

9 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

24 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago