ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ: ನೂತನ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಗ್ರಾಮಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನೆಡೆದಿದ್ದು. ನೂತನ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 30, ಬುಧವಾರದಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವ ಸದಸ್ಯರು ಅವಿರೋಧವಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ ರವರನ್ನು ಅಧ್ಯಕ್ಷರಾಗಿ ಹಾಗೂ ಮಂಜುಳಮ್ಮ ರಾಜಕುಮಾರ್ ರವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಗಿರಿಜಾಂಬ ಎನ್ ಘೋಷಿಸಿದರು.

ನೂತನ ಅಧ್ಯಕ್ಷರಿಗೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯಣ್ಣ, ಕೆಪಿಸಿಸಿ ಸದಸ್ಯರಾದ ಮುನಿರಾಜು ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿರಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ, ನರಸಿಂಹಮೂರ್ತಿ, ಮುನಿಕೃಷ್ಣಪ್ಪ , ನಾಗೇಶ್, ಗಂಗಾಧರ. ಮಹಿಳಾ ಸದಸ್ಯರಾದ ಲೋಕೇಶ್ವರಿ ರವಿ ಸಿದ್ದಪ್ಪ, ವರಲಕ್ಷ್ಮೀ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೆಂಕಟೇಶ್, ಸುರೇಶ್ ಬಾಬು, ವೆಂಕಟೇಗೌಡ, ಮುಖಂಡರಾದ ಪುಟ್ಟಪ್ಪ, ಸುಬ್ರಹ್ಮಣ್ಯಪ್ಪ, ಉದಯ ಆರಾಧ್ಯ, ಪಿಡಿಒ ವೆಂಕಟೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

1 hour ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

10 hours ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

20 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

22 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

23 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

1 day ago