ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಗ್ರಾಮಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನೆಡೆದಿದ್ದು. ನೂತನ ಅಧ್ಯಕ್ಷರಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ, ಉಪಾಧ್ಯಕ್ಷರಾಗಿ ಮಂಜುಳಮ್ಮ ರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಕ್ಟೋಬರ್ 30, ಬುಧವಾರದಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವ ಸದಸ್ಯರು ಅವಿರೋಧವಾಗಿ ಮುನಿಲಕ್ಷ್ಮಮ್ಮ ರಾಮಕೃಷ್ಣ ರವರನ್ನು ಅಧ್ಯಕ್ಷರಾಗಿ ಹಾಗೂ ಮಂಜುಳಮ್ಮ ರಾಜಕುಮಾರ್ ರವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಗಿರಿಜಾಂಬ ಎನ್ ಘೋಷಿಸಿದರು.
ಈ ಸಂದರ್ಭದಲ್ಲಿ ಹಿರಿಯ ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ, ನರಸಿಂಹಮೂರ್ತಿ, ಮುನಿಕೃಷ್ಣಪ್ಪ , ನಾಗೇಶ್, ಗಂಗಾಧರ. ಮಹಿಳಾ ಸದಸ್ಯರಾದ ಲೋಕೇಶ್ವರಿ ರವಿ ಸಿದ್ದಪ್ಪ, ವರಲಕ್ಷ್ಮೀ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೆಂಕಟೇಶ್, ಸುರೇಶ್ ಬಾಬು, ವೆಂಕಟೇಗೌಡ, ಮುಖಂಡರಾದ ಪುಟ್ಟಪ್ಪ, ಸುಬ್ರಹ್ಮಣ್ಯಪ್ಪ, ಉದಯ ಆರಾಧ್ಯ, ಪಿಡಿಒ ವೆಂಕಟೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…