ತೂಬಗೆರೆ ಪರೀಕ್ಷಾ ಕೇಂದ್ರದ ಸಿಸಿಟಿವಿ ಕ್ಯಾಮೆರಾ ನಾಶ ವಿಚಾರ: ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭೇಟಿ, ಪರಿಶೀಲನೆ

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಳೆದ ರಾತ್ರಿ ಕಿಡಿಗೇಡಿಗಳು ನಾಶಪಡಿಸಿರುವ ಘಟನೆ ನಡೆದಿದೆ‌. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೃತ್ಯದಲ್ಲಿ ಭಾಗಿರುವ ಕಿಡಿಗೇಡಿಗಳನ್ನು ಶೀಘ್ರವಾಗಿ ಪತ್ತೆ ಮಾಡಿ, ಅವರ ವಿರುದ್ಧ ಕಾನೂನು ಕ್ರಮ‌ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಪರೀಕ್ಷೆಗೆ ಯಾವುದೇ ಅಡ್ಡಿ ಆತಂಕ ಆಗದ ರೀತಿ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದರು.

ಕಳೆದ ರಾತ್ರಿ ಯಾರೋ ಕಿಡಿಗೇಡಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಗೇಟ್, ಕೊಠಡಿಗಳ ಬಾಗಿಲು‌ ಮುರಿದು, ಕೊಠಡಿಗಳಿಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಿತ್ತು, ಮತ್ತೆ ಜೋಡಿಸುವ ಪ್ರಯತ್ನ ಮಾಡಿದ್ದಾರೆ.

10 ಕೊಠಡಿಗಳಲ್ಲಿ 14 ಕ್ಯಾಮೆರಗಳನ್ನು ಅಳವಡಿಸಲಾಗಿತ್ತು. ಅದರಲ್ಲಿ 6 ಕ್ಯಾಮೆರಾಗಳನ್ನು ಕಿತ್ತೆಸೆದಿದ್ದಾರೆ. ಸದ್ಯ ನಾಶಪಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಮತ್ತೆ ಜೋಡಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಸಯೀದಾ ಅನೀಸ್ ಮುಜಾವರ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *