ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣಪ್ಪನವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಅ.9) ನಿಧನರಾಗಿದ್ದಾರೆ, ಶನಿವಾರ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಾರಾಣಪ್ಪನವರ ನಿಧನಕ್ಕ ಸಂತಾಪ ವ್ಯಕ್ತಪಡಿಸಿದ ಲಾಯರ್ ಪ್ರತಾಪ್, ಹಳ್ಳಿರೈತ ಅಂಬರೀಷ್, ಸೇರಿದಂತೆ ರಾಜಕೀಯ ಮುಖಂಡರು, ರೈತರು ನಾರಾಯಣಪ್ಪ ತೂಬಗೆರೆಯ ಹಿರಿಯ ಮುಖಂಡರು, ಸಹಕಾರ ಕ್ಷೇತ್ರದಲ್ಲಿ ರೈತರಿಗೆ ಸಾಲ ಕೊಡಿಸುವ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದರು, ಈ ಕಾರಣದಿಂದ ಅವರನ್ನು ತೂಬಗೆರೆ ಸುತ್ತಮುತ್ತಲಿನ ರೈತರು ಸಬ್ಸಿಡಿ ನಾರಾಯಣಪ್ಪ ಅಂತಾನೇ ಕರೆಯುತ್ತಿದ್ದರು. ಆರ್.ಎಲ್.ಜಾಲಪ್ಪನವರು ಗರಡಿಯಲ್ಲಿ ಪಳಗಿದ ಮುಖಂಡರು, ಜೆ.ನರಸಿಂಹಸ್ವಾಮಿಯವರ ಸ್ನೇಹಿತರಾಗಿದ್ದರು. ತೂಬಗೆರೆಯಲ್ಲಿ ಅನ್ನದಾತರಾಗಿದ್ದ ಅವರು, ತೂಬಗೆರೆಯಲ್ಲಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಬರುವ ಶಾಲಾ ಮಕ್ಕಳಿಗೆ ಊಟದ ವ್ಯವಸ್ಥೆಯನ್ನ ಮಾಡುತ್ತಿದ್ದರು, ಅವರ ಸಾವು ತೂಬಗೆರೆ ಹೋಬಳಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಅವರಿಗೆ ನೀಡಲಿ ಎಂದರು.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…