ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ರವಿ ಸಿದ್ದಪ್ಪ ಅವರು ಆಯ್ಕೆಯಾಗಿದ್ದಾರೆ. ಇಂದು ಅಧಿಕೃತವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ನವರು ಆದೇಶ ಪತ್ರ ನೀಡಿ ಅಭಿನಂದಿಸಿದ್ದಾರೆ.
ಈ ಹಿಂದೆ ರಂಗಪ್ಪನವರು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು. ಅವರ ಜಾಗಕ್ಕೆ ರವಿ ಸಿದ್ದಪ್ಪ ಅವರನ್ನು ಆಯ್ಕೆ ಮಾಡಲಾಗಿದೆ….
ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರವಿ ಸಿದ್ದಪ್ಪನವರಿಗೆ ಕಾಂಗ್ರೆಸ್ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ ಅವರು ಅಭಿನಂದಿಸಿ ಶುಭಕೋರಿದ್ದಾರೆ…