ತಾಲೂಕಿನ ತೂಬಗೆರೆ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಾರಸಿಂಹನಹಳ್ಳಿಯ ನರಸೇಗೌಡ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು.
ರೈತರ ಸೇವಾ ಸಹಕಾರ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಅ.1ರಂದು ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷರ ಸ್ಥಾನಕ್ಕೆ ನರಸೇಗೌಡ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣಪ್ಪ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳು ನರಸೇಗೌಡ ಹಾಗೂ ಕೃಷ್ಣಪ್ಪ ಅವರನ್ನ ಕ್ರಮವಾಗಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ಘೋಷಿಸಿದರು.
ಇದೇ ಸಂಧರ್ಭದಲ್ಲಿ ನೂತನ ಅದ್ಯಕ್ಷರಾದ ನರಸೇಗೌಡ, ಮಾತನಾಡಿ, ಸರ್ವ ನಿರ್ದೇಶಕರ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಬೆಂಬಲಿಗರು ಹಾಗೂ ಹಿತೈಷಿಗಳು ಸಿಹಿ ತಿನಿಸಿ ಶುಭ ಹಾರೈಸಿದರು.
ಈ ವೇಳೆ ಚುನಾವಣೆ ಅಧಿಕಾರಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಿಟರ್ನಿಂಗ್ ಅಫೀಸರ್ ಟಿ. ಭಾಸ್ಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಅರವಿಂದ್, ಕೆಪಿಸಿಸಿ ಸದಸ್ಯ ಎಸ್.ಆರ್.ಮುನಿರಾಜು, ಸಂಘದ ಮಾಜಿ ಅಧ್ಯಕ್ಷ ಮುನಿರಾಜಪ್ಪ, ನಾಗರಾಜ್, ಚಿಕ್ಕ ಪಿಳ್ಳಪ್ಪ, ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ವಿ.ವೆಂಕಟೇಶ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವೆಂಕಟಪ್ಪ, ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಮುನಿಕೃಷ್ಣಪ್ಪ, ಗಂಗರಾಜು, ರಾಮಕೃಷ್ಣ, ಸಂಘದ ನಿರ್ದೇಶಕಿ ಅನ್ನಪೂರ್ಣಮ್ಮ, ನಾಗರತ್ನಮ್ಮ, ಮುತ್ತಮ್ಮ, ರೈತ ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಹಾಗೂ ರೈತರು ಹಾಜರಿದ್ದರು.