ತಾಲೂಕಿನ ತೂಬಗೆರೆಯ ತೇರಿನಬೀದಿಯಲ್ಲಿರುವ ಇತಿಹಾಸದ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿಯ ದೇವಾಲಯದ ಹುಂಡಿ ಎಣಿಕೆ ಕಾರ್ಯವು ಕಂದಾಯ ಇಲಾಖೆಯ ಅಧಿಕಾರಿಗಳ ಹಾಗು ದೇವಾಲಯದ ವ್ಯವಸ್ಥಾಪನ ಸಮಿತಿ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.
ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 3,71,950 ರೂ. ಸಂಗ್ರಹವಾಗಿದೆ. ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು, ಗ್ರಾಮದ ಮುಖಂಡರು, ತೂಬಗೆರೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.
ಪ್ರತಿ ವರ್ಷಕ್ಕೊಮ್ಮೆ ನಿಯಮಾನುಸಾರ ಹುಂಡಿ ಎಣಿಕೆ ಕಾರ್ಯ ಮಾಡಲಾಗುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ಹಣ ಸಂಗ್ರಹವಾಗಿದೆ ಎಂದು ಎಣಿಕೆ ಕಾರ್ಯದ ನೇತೃತ್ವ ವಹಿಸಿದ್ದ ಹೋಬಳಿ ರಾಜಸ್ವ ನಿರೀಕ್ಷಕ ಲಕ್ಷ್ಮೀ ನರಸಿಂಹ ಮಾಹಿತಿ ನೀಡಿದ್ದಾರೆ.