ತೂಬಗೆರೆ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ವಿಜೃಂಭಣೆ ಬ್ರಹ್ಮರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು.

ಮಧ್ಯಾಹ್ನ 12-12 ರಿಂದ 1:00 ರೊಳಗಿನ ಅಭಿಜಿನ್ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು.

ರಥೋತ್ಸವದ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಹಾಗೂ ವಿವಿಧ ಸಂಘಟನೆಗಳ ಮೂಲಕ ಪಾನಕ ಮಜ್ಜಿಗೆ ವಿತರಣೆ ನಡೆಯಿತು.

ಬ್ರಹ್ಮರಥೋತ್ಸದ ಪ್ರಯುಕ್ತ ದೇಗುಲವನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿದೆ. ರಾತ್ರಿ 7 ಗಂಟೆಗೆ ವರ್ಣರಜಿಂತ ಬಾಣಬಿರುಸುಗಳ ಪ್ರದರ್ಶನದ ಜೊತೆಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ.

Leave a Reply

Your email address will not be published. Required fields are marked *