ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟೇಶ್ವರ ದೇವಾಲಯದ ನೂತನ ರಾಜಗೋಪುರ ಉದ್ಘಾಟನೆ, ಕುಂಭಾಭಿಷೇಕ ಹಾಗೂ ಕಲ್ಯಾಣ ಮಂಟಪ ಶಂಕುಸ್ಥಾಪನೆಯನ್ನು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಆಹಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಕೆ.ಎಚ್.ಮುನಿಯಪ್ಪನವರು ಅದ್ಧೂರಿಯಾಗಿ ನೆರವೇರಿಸಿದರು.
ವಿವಿಧ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ, 108 ಕಳಸ ಸ್ಥಾಪನೆ, ಗಣಪತಿ ಹೋಮ, ಪುಣ್ಯಾಹ, ಪೂರ್ಣಾಹುತಿ ಮತ್ತು ಮಹಾ ಕುಂಭಾಭಿಷೇಕದೊಂದಿಗೆ ರಾಜಗೋಪುರ ಲೋಕಾರ್ಪಣೆಗೊಂಡಿತು. ವಿಶೇಷ ಪೂಜೆ, ಅಲಂಕಾರ, ಪ್ರಸಾದ ವಿನಿಯೋಗ ಕಾರ್ಯಕ್ರಮ ಹಾಗೂ ವಿಶೇಷ ದರ್ಶನ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲೆಯಲ್ಲಿ ಸುಮಾರು 2ಸಾವಿರದಿಂದ ಮೂರು ಸಾವಿರ ಬಡವರಿಗೆ ಸೈಟ್ ಕೊಟ್ಟು, ಮನೆಕಟ್ಟಿಸಿ ಕೊಡುತ್ತೇವೆ. ಅದರ ಜೊತೆಗೆ ಸುಮಾರು ವರ್ಷಗಳಿಂದ ಫಾರಂ ನಂ. 53ರ ಅರ್ಜಿ ಹಾಕಿಕೊಂಡು ಸರ್ಕಾರಿ ಭೂಮಿಯಲ್ಲಿ ಉತ್ತುಬಿತ್ತು ಬೆಳೆಬೆಳೆಯುತ್ತಿರುವ ರೈತರಿಗೆ ಆದಷ್ಟು ಬೇಗ ಜಮೀನು ಮಂಜೂರು ಮಾಡುವ ಕೆಲಸ ಮಾಡುತ್ತೇವೆ ಎಂದು ಕೆ.ಎಚ್ ಮುನಿಯಪ್ಪ ಹೇಳಿದರು.
ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯ ಕಣ್ವ ಮಠದ ಶ್ರೀ ವಿದ್ಯಾ ಕಣ್ವ ವಿರಾಜ ತೀರ್ಥ ಶ್ರೀಪಾದಗಳು, ಕೆಪಿಸಿಸಿ ಸದಸ್ಯ ಎಸ್. ಆರ್. ಮುನಿರಾಜ್, ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್ ಕುಮಾರ್, ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಮುರಳಿಧರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಕಾರ್ಯದರ್ಶಿ ಪ್ರತಾಪ್, ದೇವನಹಳ್ಳಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಯಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುನಿಲಕ್ಷಮ್ಮ ರಾಮಕೃಷ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್. ಅರವಿಂದ್, ಗ್ರಾಮ ಪಂಚಾಯತಿ ಸದಸ್ಯ ಮುನಿಕೃಷ್ಣಪ್ಪ, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ ಹಾಗೂ ಊರಿನ ಗ್ರಾಮಸ್ಥರು ಮಹಿಳೆಯರು ಕಳಸ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…