ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.95.45 ಸಾಧನೆ ಮಾಡಿದ್ದು, ಮತ್ತೊಮ್ಮೆ ಮೆಚ್ಚುಗೆಗೆ ಪಾತ್ರವಾಗಿದೆ.
ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ. ಕಲಾ ವಿಭಾಗದಲ್ಲಿ ಲಾವಣ್ಯಾ ಆರ್ (544) ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಚಂದನಾ (556) ಅಂಕಗಳೊಂದಿಗೆ ಹಾಗೂ ವಾಣಿಜ್ಯ ವಿಭಾಗದಲ್ಲಿ ನಿರಂಜನ್ ಎಂ (518) ಅಂಕಗಳೊಂದಿಗೆ ಗಮನಾರ್ಹ ಸಾಧನೆ ಮಾಡಿದ್ದಾರೆ.
ಈ ಬಾರಿ ಒಟ್ಟು 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಉಳಿದಂತೆ ಕಲೆ ವಿಭಾಗದ ಧನುಶ್ರೀ ಎಂ (524), ಗಗನಾ ಎನ್ (519) ಗಮನಸೆಳೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಭರತ್ ಆರ್ (487), ಲಾವಣ್ಯಾ ಎಸ್ (484) ಉತ್ತಮ ಅಂಕಗಳನ್ನು ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಗಗನ್ ವೈ.ಸಿ (483) ಹಾಗೂ ಸ್ಪೂರ್ತಿ (450) ಸಾಧನೆ ಮಾಡಿದ್ದಾರೆ.
ಈ ಸಾಧನೆಗೆ ವಿದ್ಯಾರ್ಥಿಗಳ ಪರಿಶ್ರಮದ ಜೊತೆಗೆ ಉಪನ್ಯಾಸಕ ವೃಂದದ ಮಾರ್ಗದರ್ಶನ ಪ್ರಮುಖ ಕಾರಣವೆಂದು ಕಾಲೇಜಿನ ಪ್ರಾಂಶುಪಾಲರಾದ ಉಷಾ ವಿ ತಿಳಿಸಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…