ತೂಬಗೆರೆ ಸರ್ಕಾರಿ ಶಾಲೆಯ ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

ತೂಬಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ, ಕ್ರೀಡೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಸಾಧನೆಗೈದ ವಿದಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ ಮಾಡಲಾಯಿತು.

ತೂಬಗೆರೆ ಸರ್ಕಾರಿ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಖೋ-ಖೋ ತಂಡ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.  ಆಯ್ಕೆಯಾದ 25 ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಕ್ರೀಡಾ ಸಮವಸ್ತ್ರ ಕೊಡುಗೆಯಾಗಿ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳ  ಸಂಘದ ಗಂಗಾಧರ್, ಜಿಲ್ಲಾ ಮಟ್ಟಕ್ಕೆ ನಮ್ಮೂರಿನ  ಶಾಲಾ ವಿದ್ಯಾರ್ಥಿಗಳು ಆಯ್ಕೆ ಆಗಿರುವುದು ತುಂಬಾ ಸಂತೋಷವಾಗಿದೆ ತಾಲೂಕು ಮಟ್ಟದಲ್ಲಿ ಅತ್ಯಂತ ಬಲಾಢ್ಯ ತಂಡಗಳನ್ನು ಎದುರಿಸಿ ಜಯಶಾಲಿಯಾಗಿರುವುದು  ಸಂತಸ ತಂದಿದೆ ಇಡೀ ಶಾಲಾ ಮಕ್ಕಳಿಗೆ ಸಿಹಿ ಹಂಚುತ್ತಿದ್ದೇವೆ ಎಂದರು.

ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ,  ಮಕ್ಕಳ ಅಮೋಘ ಸಾಧನೆಯಿಂದ ಶಾಲೆಯ ಕೀರ್ತಿ ಹೆಚ್ಚಾಗಿದೆ. ಈ ಕ್ರೀಡಾಪಟುಗಳಿಗೆ ನಮ್ಮ ಊರಿನ ಗ್ರಾಮಸ್ಥರ ಬೆಂಬಲ ಸದಾ ಇರುತ್ತೆ. ಮುಂದಿನ ದಿನಗಳಲ್ಲಿ ಯಶಸ್ವಿ ಪ್ರದರ್ಶನದೊಂದಿಗೆ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲಿ ಎಂದು ಹಾರೈಸಿದರು.

ಮುಖ್ಯ ಶಿಕ್ಷಕ ಗಿರೀಶ್ ಮಾತನಾಡಿ, ನಮ್ಮ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಗ್ರಾಮಸ್ಥರು ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಶಾಲೆಯಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದಿದ್ದರಿಂದ, ಗ್ರಾಮದ ಯುವಕರು ತರಬೇತಿ ನೀಡಿ ಈ ಸಾಧನೆ ಮಾಡಲು ಸಹಾಯ ಮಾಡಿದ್ದಾರೆ. ಅವರಿಗೆ ಶಾಲೆಯ ಪರವಾಗಿ ವಂದನೆಗಳನ್ನು ತಿಳಿಸುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸತ್ಯನಾರಾಯಣಪ್ಪ, ವೆಂಕಟೇಶ್, ನಿವೃತ್ತ ಯೋಧ ಅನಂತ ರಾಜಗೋಪಾಲ್, ತರಬೇತುದಾರ ವಿನೋದ್, ಗ್ರಾಮಸ್ಥರಾದ ನರಸಿಂಹಮೂರ್ತಿ. ಮೂರ್ತಿ, ಕಿರಣ್, ಸುನಿಲ್, ಮಂಜುನಾಥ್, ಶಾಲೆಯ ಸಹ ಶಿಕ್ಷಕರು,  ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

8 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

10 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

12 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

12 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

14 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

19 hours ago