ಅತಿವೇಗದಿಂದ ಬಂದು ಕಾರು ನಿಯಂತ್ರಣ ತಪ್ಪಿ ತೆರೆದ ಬಾವಿಗೆ ಬಿದ್ದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೀಲೇರು ಸಮೀಪದ ಬಾಲಂವಾರಪಲ್ಲಿ ಗ್ರಾಮದ ಬಳಿ ಘಟನೆ ನಡೆದಿದೆ.
ಮೃತರನ್ನ ಶಿವಯ್ಯ, ಗಂಗನ್ನ ಹಾಗೂ ಲೋಕೇಶ್ ಎಂದು ಗುರುತಿಸಲಾಗಿದೆ. ಮೃತರನ್ನ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಮೂಲದವರು ಎಂದು ತಿಳಿದು ಬಂದಿದೆ. ಅಡುಗೆ ಕೆಲಸಕ್ಕೆ ಹೋಗಿ ಬರುವ ವೇಳೆ ಅಪಘಾತ ನಡೆದಿದೆ ಎನ್ನಲಾಗಿದೆ.
ಕಾರಿನಲ್ಲಿ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದ 5 ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಸುನಿಲ್ ಹಾಗೂ ತಿಪ್ಪಾರೆಡ್ಡಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನ ಪೀಲೇರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೀಲೇರು ಶಾಸಕ ನಲ್ಲಾರಿ ಕಿಶೋರ್ ಕುಮಾರ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಬಾವಿಗೆ ಬಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆ ಎತ್ತಿ ಹೊರ ತೆಗೆಯಲಾಗಿದೆ.
ಪೀಲೇರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…