ತೆರೆದ ಬಾವಿಗೆ ಬಿದ್ದ ಕಾರು: ಮೂರು ಮಂದಿ ಸಾವು

ಅತಿವೇಗದಿಂದ ಬಂದು ಕಾರು ನಿಯಂತ್ರಣ ತಪ್ಪಿ ತೆರೆದ ಬಾವಿಗೆ ಬಿದ್ದಿದ್ದು,‌ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಪೀಲೇರು ಸಮೀಪದ ಬಾಲಂವಾರಪಲ್ಲಿ ಗ್ರಾಮದ ಬಳಿ ಘಟನೆ ನಡೆದಿದೆ.

ಮೃತರನ್ನ ಶಿವಯ್ಯ, ಗಂಗನ್ನ ಹಾಗೂ ಲೋಕೇಶ್ ಎಂದು ಗುರುತಿಸಲಾಗಿದೆ. ಮೃತರನ್ನ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಮೂಲದವರು ಎಂದು ತಿಳಿದು ಬಂದಿದೆ. ಅಡುಗೆ ಕೆಲಸಕ್ಕೆ ಹೋಗಿ ಬರುವ ವೇಳೆ ಅಪಘಾತ ನಡೆದಿದೆ ಎನ್ನಲಾಗಿದೆ.

ಕಾರಿನಲ್ಲಿ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದ 5 ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಸುನಿಲ್ ಹಾಗೂ ತಿಪ್ಪಾರೆಡ್ಡಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನ ಪೀಲೇರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೀಲೇರು ಶಾಸಕ ನಲ್ಲಾರಿ ಕಿಶೋರ್ ಕುಮಾರ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಬಾವಿಗೆ ಬಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆ ಎತ್ತಿ ಹೊರ ತೆಗೆಯಲಾಗಿದೆ.

ಪೀಲೇರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

10 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

16 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago