ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ: ಸಭೆ ಮುಖ್ಯಾಂಶಗಳು ಇಲ್ಲಿವೆ ನೋಡಿ

ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು ಇಲ್ಲಿವೆ ಓದಿ…

ವಾಣಿಜ್ಯ ತೆರಿಗೆ
• ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ.

• ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್‌ಟಿ ರೂ.53,522 ಕೋಟಿ, ಕೆಎಸ್‌ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ.

• ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ.

• ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು.

• ನವೆಂಬರ್ ಅಂತ್ಯದವರೆಗೆ ಸುಮಾರು 13 ಸಾವಿರ ತಪಾಸಣೆಗಳನ್ನು ಮಾಡಿದ್ದು, ತಪಾಸಣೆಯಿಂದ ರೂ. 3,183 ಕೋಟಿ ತೆರಿಗೆ ಸಂಗ್ರಹಿಸಲಾಗಿದೆ.

• ವಾಣಿಜ್ಯ ತೆರಿಗೆ ವಿಚಕ್ಷಣಾ ದಳ ತೆರಿಗೆ ಕಳ್ಳತನವನ್ನು ತಪ್ಪಿಸಲು ನಿರಂತರ ತಪಾಸಣೆಗಳನ್ನು ಕೈಗೊಳ್ಳಬೇಕು. ತೆರಿಗೆ ತಪ್ಪಿಸಲು ಯಾವುದೇ ಅವಕಾಶ ಇಲ್ಲದಂತೆ ಕಟ್ಟೆಚ್ಚರದಿಂದ ಕಾರ್ಯ ನಿರ್ವಹಿಸಬೇಕು. ಹಿಂದಿನ ವರ್ಷಗಳ ಅಂಕಿ ಅಂಶಗಳನ್ನು ಬಳಸಿಕೊಂಡು, ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಿ, ಅನಾಲಿಸಿಸ್ ವಿಭಾಗವನ್ನು ಬಲಪಡಿಸಬೇಕು.

• ಬೋಗಸ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳ ಮೇಲೆ ನಿಗಾ ಇರಿಸಿ ಅಂತಹ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸುವ ಅಗತ್ಯವಿದೆ.

ಅಬಕಾರಿ ತೆರಿಗೆ
• 2025-26 ನೇ ಹಣಕಾಸು ಸಾಲಿನಲ್ಲಿ ರೂ. 43,000 ಕೋಟಿ ಅಬಕಾರಿ ತೆರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ನವೆಂಬರ್‌ ಅಂತ್ಯದವರೆಗೆ ರೂ.26,215 ಕೋಟಿ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಬಕಾರಿ ತೆರಿಗೆ ಸಂಗ್ರಹದಲ್ಲಿ ಶೇ.10.46ರಷ್ಟು ಬೆಳವಣಿಗೆ ದರವನ್ನು ಸಾಧಿಸಲಾಗಿದೆ.

• ನಿಗದಿತ ಗುರಿಯನ್ನು ಸಾಧಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕಿದೆ.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

3 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

6 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

8 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

21 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

23 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago