ತೆರಿಗೆ ಹಂಚಿಕೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ

ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತ ಮಾಹಿತಿ:

ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಿದರು.

15 ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ. ಇದಲ್ಲದೆ, 15ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ ರೂ.11,495 ಕೋಟಿಗಳ ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ.80,000 ಕೋಟಿಗಳು ರಾಜ್ಯಕ್ಕೆ ನಷ್ಟವಾಗಿದೆ.

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸುತ್ರವನ್ನು ಲೆಕ್ಕಮಾಡಲು ಆದಾಯ-ದೂರ (income-distance) ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45 ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಆರ್ಥಿಕ ಪ್ರಗತಿಗೆ (GDP) ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕೆಂದು ಮನವಿ ಮಾಡಿದರು.

ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ, ಏಕೆಂದರೆ ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ (FRBM) ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕೆಂದು ಹಣಕಾಸು ಆಯೋಗದ ಮುಂದೆ ಪ್ರಸ್ತಾಪಿಸಿದ್ದನ್ನು ತಿಳಿಸಿದರು.

ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಪ್ರಸ್ತಾಪಿಸಿದರು. ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿದರು.

ಕರ್ನಾಟಕದ ಪ್ರಸ್ತಾವನೆಗಳು ವಿಶೇಷ ಪ್ರಕರಣವೆಂದು ಪರಿಗಣಿಸದೆ, ಇದು ಒಟ್ಟಾರೆ ರಾಷ್ಟ್ರೀಯ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಪ್ರಸ್ತಾವನೆಗಳಾಗಿವೆ ಎಂದು ಪರಿಗಣಿಸಬೇಕು.

16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಸಲ್ಲಿಸುವ ಜ್ಞಾಪಕ ಪತ್ರದಲ್ಲಿ ರಾಜ್ಯ ಸರ್ಕಾರದ ಈ ಪ್ರಸ್ತಾವನೆಗಳನ್ನು ಸೇರಿಸುವಂತೆ ಮನವಿ ಮಾಡುವ ಮೂಲಕ, ಎಲ್ಲಾ ರಾಜ್ಯಗಳು ದೇಶದ ಅಭಿವೃದ್ಧಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಬೆಳವಣಿಗೆ ಆಧಾರಿತ ತೆರಿಗೆ ಹಂಚಿಕೆ ಅವಶ್ಯಕ ಎಂಬುದನ್ನು ವಿವರಿಸಿದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

11 hours ago