ರೇವಂತ್ ರೆಡ್ಡಿ ಅವರನ್ನು ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಇಂದು ಅಧಿಕೃತವಾಗಿ ಆಯ್ಕೆ ಮಾಡಿದೆ. ಡಿ.7ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಿಎಲ್‌ಪಿ ಸಭೆಯಲ್ಲಿ ಶಾಸಕರು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಪರಿಗಣಿಸಿ ರೇವಂತ್ ರೆಡ್ಡಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಡಿಸೆಂಬರ್ 3 ರಂದು ನಡೆದಿದ್ದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 65 ಸ್ಥಾನಗಳನ್ನು ಗೆದ್ದು ಬೀಗಿತ್ತು. ಸ್ಪಷ್ಟ ಬಹುಮತಕ್ಕೆ 60 ಸ್ಥಾನಗಳ ಅವ್ಯಕತೆ ಇದೆ. ಬಿಆರ್‌ಎಸ್ 39, ಬಿಜೆಪಿ 8 ಹಾಗೂ ಇತರರು 7 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹ್ಯಾಟ್ರಿಕ್ ಅಧಿಕಾರದ ಕನಸು ಕಂಡಿದ್ದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಮುಖಭಂಗವಾಗಿದೆ.