2024ರ ಲೋಕಸಭೆ ಚುನಾವಣೆಗೆ ಮುನ್ನವೇ ನಾಲ್ಕು ಪ್ರಮುಖ ರಾಜ್ಯ ಘಟಕಗಳಲ್ಲಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿರುವ ಬಿಜೆಪಿ ಹೈಕಮಾಂಡ್. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿರೋ ಬಿಜೆಪಿ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ.ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ.ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್.
ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ.
ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಸಭೆಗಳ ನಡುವೆ ಬಿಜೆಪಿಯಲ್ಲಿ ಸಂಘಟನಾ ಪುನರ್ ರಚನೆಯ ಬಗ್ಗೆ ಚರ್ಚೆ ನಡೆದಿದೆ.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…