ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಹೈದರಾಬಾದ್‌ನ ಯಶೋದಾ ಆಸ್ಪತ್ರೆಗೆ ಭೇಟಿ ನೀಡಿ ಬಿಆರ್ ಎಸ್ ಮುಖ್ಯಸ್ಥ ಹಾಗೂ ತೆಲಂಗಾಣದ ಮಾಜಿ ಸಿಎಂ ಕೆ.ಚಂದ್ರಶೇಖರ್ ರಾವ್ ಅವರ ಆರೋಗ್ಯ ವಿಚಾರಿಸಿದರು.
ಡಿ.7ರಂದು ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, ಇಲ್ಲಿನ ಯಶೋಧ ಆಸ್ಪತ್ರೆಯಲ್ಲಿ ಮೂಳೆ ಜೋಡಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದಾರೆ. ಈ ಹಿನ್ನೆಲೆ ಹಾಲಿ ಮುಖ್ಯಮಂತ್ರಿ ಅವರು ಮಾಜಿ ಮುಖ್ಯಮಂತ್ರಿಯ ಯೋಗಕ್ಷೇಮ ವಿಚಾರಿಸಿದರು.
ಈ ವೇಳೆ ಸಚಿವರು, ಅಧಿಕಾರಿಗಳು, ವೈದ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.