ತೆಲುಗು ದೇಶಂ ಪಕ್ಷದ ಪ್ರಚಾರ ವಾಹನಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಪ್ರಾಣಾಪಾಯದಿಂದ ಪಾರಾದ ಚಾಲಕ

ಆಂಧ್ರದ ಅನ್ನಮಯ್ಯ ಜಿಲ್ಲೆಯ ವಾಲ್ಮೀಕಿಪುರಂ ಮಂಡಲದ ವಿಟ್ಟಲಂ ಗ್ರಾಮದಲ್ಲಿ ಶನಿವಾರ ತೆಲುಗು ದೇಶಂ ಪಕ್ಷದ ಪ್ರಚಾರ ವಾಹನಕ್ಕೆ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕ ಒಳಗಿರುವಾಗಲೇ ಆರೋಪಿಗಳು ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 

ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಬೆಂಕಿ‌ಹಚ್ಚಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಟಿಡಿಪಿ ಮುಖಂಡರು ತಿರುಪತಿ-ಮದನಪಲ್ಲಿ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ್ದಾರೆ.

ಪ್ರತಿಭಟನೆಯ ಪರಿಣಾಮವಾಗಿ, ಜನನಿಬಿಡ ಹೆದ್ದಾರಿಯಲ್ಲಿ ವಾಹನಗಳು ಎರಡೂ ಬದಿಗಳಲ್ಲಿ ಸುಮಾರು ಎರಡು ಕಿಲೋಮೀಟರ್‌ಗಳಷ್ಟು ನಿಂತಿದ್ದವು. ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಕಿರಣ್ ರೆಡ್ಡಿ ಅವರ ಕಿರಿಯ ಸಹೋದರ ನಲ್ಲಾರಿ ಕಿಶೋರ್ ಕುಮಾರ್ ರೆಡ್ಡಿ ಅವರು ಟಿಡಿಪಿ ಟಿಕೆಟ್‌ನಲ್ಲಿ ಪಿಲೇರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಕಿಶೋರ್ ಕುಮಾರ್ ರೆಡ್ಡಿ ಅವರ ಪತ್ನಿ ತನುಜಾ ರೆಡ್ಡಿ ಅವರು ವಿಟಾಲಂ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಪ್ರಚಾರ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.  ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಟಿಡಿಪಿ ಮುಖಂಡರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *