ತೊಂಡೆಕಾಯಿ ತೋಟದಲ್ಲಿ ಗಾಂಜಾ ಬೆಳೆದಿದ್ದ ಆಸಾಮಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಹಾರ ಮೂಲದ ರಾಮ್ ದ್ಯಾಲ್ ಪಾಸ್ವಾನ್ (36), ಬಂಧಿತ ಆರೋಪಿ.
ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬಿಹಾರದಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚೌಗೊಂಡನಹಳ್ಳಿಯ ಶಾಂತಕುಮಾರ್ ಎಂಬುವವರ ತೋಟದಲ್ಲಿ ಕೂಲಿ ಕೆಲಸಕ್ಕೆಂದು ರಾಮ್ ದ್ಯಾಲ್ ಪಾಸ್ವಾನ್ ಬಂದಿದ್ದ.
ಈ ವೇಳೆ ತೋಟದಲ್ಲಿ ತೊಂಡೆಕಾಯಿ ಬೆಳೆ ಜೊತೆಗೆ ಗಾಂಜಾ ಸೊಪ್ಪುನ್ನು ಬೆಳೆಯಲು ಪ್ರಾರಂಭ ಮಾಡಿದ್ದಾನೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಎನ್ ಡಿಪಿಎಸ್ ಆಕ್ಟ್ 1985ರ ಅಡಿಯಲ್ಲಿ ಸುಮಾರು 30 ಸಾವಿರ ಮೌಲ್ಯದ 8 ಕೆ.ಜಿ ಗಾಂಜಾ ಸೊಪ್ಪು ಸಮೇತ ಆರೋಪಿಯನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…