ತೊಂಡೆಬಾವಿಯ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಲೇಬರ್ ವಸತಿಗೃಹದಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿ ಅಭಿಜಿತ್ (24), ಏಳು ತಿಂಗಳ ಹಿಂದೆ ಕಾರ್ಖಾನೆಯಲ್ಲಿ ಕೆಲಸ ಮಾಡಲು ಬಂದಿದ್ದ ಯುವಕನಾಗಿದ್ದು, ಈ ಘಟನೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.
ಸ್ಥಳದಲ್ಲಿ ಕಾರ್ಖಾನೆಯ ನಿರ್ಲಕ್ಷತೆಯನ್ನು ಕಾರ್ಮಿಕರು ಕಿಡಿಕಾರಿದ್ದಾರೆ. ಇದಕ್ಕೆ ಕಾರ್ಖಾನೆಯ ಆಡಳಿತದಿಂದ ಯಾವುದೇ ತಕ್ಷಣದ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ಈ ಘಟನೆ ಕಾರ್ಖಾನೆಯ ನಿರ್ವಹಣೆಯ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಎಬ್ಬಿಸಿದೆ. ಸ್ಥಳೀಯರು ಮತ್ತು ಕಾರ್ಮಿಕರು ಈ ಘಟನೆಗೆ ಸಂಬಂಧಿಸಿದಂತೆ ತಕ್ಷಣದ ತನಿಖೆ ಮತ್ತು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಿ ಘಟನೆಗೆ ನಿಖರ ಕಾರಣವಾದರೂ ಏನು ಎಂಬುವುದರ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕಿದೆ.