ತೋಟಗಾರಿಕೆ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನ

ರಾಜ್ಯದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2023-24ನೇ ಸಾಲಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು 2024 ರ ಜುಲೈ 01  ರಿಂದ 2025 ಮಾರ್ಚ್ 31ರ ವರೆಗೆ ಆಯೋಜಿಸುವ ಸಂಬಂಧ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ 2024 ಜೂನ್ 03 ರಂದು ಸಂಜೆ 5.30 ರ ವರೆಗೆ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ. ಸಂದರ್ಶನದ ದಿನಾಂಕ: 06 ಜೂನ್ 2024 ಆಗಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರ ಕಚೇರಿ (ಜಿಪಂ), ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಕಚೇರಿಗೆ ನಿಗದಿತ ದಿನಾಂಕದೊಳಗಾಗಿ ಸಲ್ಲಿಸಲು ತಿಳಿಸಿದೆ.

ವಿದ್ಯಾರ್ಹತೆ

ಕನ್ನಡ ವಿಷಯಗಳೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ

ಪರಿಶಿಷ್ಟ ಜಾತಿ/ಪಂಗಡ/ಅಂಗವಿಕಲ ರಿಗೆ ಕನಿಷ್ಠ 18 ವರ್ಷ ಮತ್ತು ಮಾಜಿ ಸೈನಿಕರಿಗೆ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ ಹಾಗೂ ಇತರರಿಗೆ ಕನಿಷ್ಠ 18 ವರ್ಷ ದಿಂದ ಗರಿಷ್ಠ 30 ವರ್ಷ.

ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1750/-ಗಳ ಮಾಸಿಕ ಶಿಷ್ಯವೇತನ (ಮಾಜಿ ಸೈನಿಕರನ್ನು ಹೊರತುಪಡಿಸಿ)ವನ್ನು ನೀಡಲಾಗುವುದು. ಶಿಷ್ಯವೇತನ/Stipend ವನ್ನು ಅಭ್ಯರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡುವುದು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಈ ಕೆಳಕಂಡ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.

1) ಶ್ರೀ ಗೋಪಾಲ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೋ. 8660733025

2) ಶ್ರೀ ಶಿವಕುಮಾರ್, ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೋ. 9844229157 ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಉಪನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

10 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

10 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

12 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

21 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

23 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago