ರಾಜ್ಯದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2023-24ನೇ ಸಾಲಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು 2024 ರ ಜುಲೈ 01 ರಿಂದ 2025 ಮಾರ್ಚ್ 31ರ ವರೆಗೆ ಆಯೋಜಿಸುವ ಸಂಬಂಧ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ 2024 ಜೂನ್ 03 ರಂದು ಸಂಜೆ 5.30 ರ ವರೆಗೆ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ. ಸಂದರ್ಶನದ ದಿನಾಂಕ: 06 ಜೂನ್ 2024 ಆಗಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ https://horticulturedir.karnataka.gov.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರ ಕಚೇರಿ (ಜಿಪಂ), ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಕಚೇರಿಗೆ ನಿಗದಿತ ದಿನಾಂಕದೊಳಗಾಗಿ ಸಲ್ಲಿಸಲು ತಿಳಿಸಿದೆ.
ವಿದ್ಯಾರ್ಹತೆ
ಕನ್ನಡ ವಿಷಯಗಳೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ
ಪರಿಶಿಷ್ಟ ಜಾತಿ/ಪಂಗಡ/ಅಂಗವಿಕಲ ರಿಗೆ ಕನಿಷ್ಠ 18 ವರ್ಷ ಮತ್ತು ಮಾಜಿ ಸೈನಿಕರಿಗೆ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ ಹಾಗೂ ಇತರರಿಗೆ ಕನಿಷ್ಠ 18 ವರ್ಷ ದಿಂದ ಗರಿಷ್ಠ 30 ವರ್ಷ.
ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 1750/-ಗಳ ಮಾಸಿಕ ಶಿಷ್ಯವೇತನ (ಮಾಜಿ ಸೈನಿಕರನ್ನು ಹೊರತುಪಡಿಸಿ)ವನ್ನು ನೀಡಲಾಗುವುದು. ಶಿಷ್ಯವೇತನ/Stipend ವನ್ನು ಅಭ್ಯರ್ಥಿಗಳ ಖಾತೆಗೆ ನೇರವಾಗಿ ಜಮೆ ಮಾಡುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಈ ಕೆಳಕಂಡ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.
1) ಶ್ರೀ ಗೋಪಾಲ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೋ. 8660733025
2) ಶ್ರೀ ಶಿವಕುಮಾರ್, ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೋ. 9844229157 ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಟಗಾರಿಕೆ ಉಪನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…