ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ವಿಮೆಗೆ ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿನ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ ಮತ್ತು ಮಾವುಗೆ ವಿಮೆ ಮಾಡಿಸಬಹುದಾಗಿದ್ದು, ಮಾವು ಬೆಳೆಗೆ ಪ್ರತಿ ಹೆಕ್ಟೇರಿಗೆ 80000 ವಿಮಾ ಮೊತ್ತ ಸಿಗಲಿದ್ದು, ರೈತರು ಶೇ 5 ರಂತೆ 4,000 ರೂಗಳು ಮಾತ್ರ ವಿಮೆ ಪಾವತಿ ಮಾಡಬೇಕು. ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರಿಗೆ 2.80.000 ರೂ ವಿಮಾ ಮೊತ್ತ ಸಿಗಲಿದ್ದು, ರೈತರು ಪ್ರತಿ ಹೆಕ್ಟೇರಿಗೆ ಶೇ 5 ರಂತೆ 14,000 ರೂಂ ವಿಮೆ ಪಾವತಿ ಮಾಡಬೇಕು.

ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ವಿಮಾ ಕಂತು ನೋಂದಾಯಿಸಿಕೊಳ್ಳಲು ಆಗಸ್ಟ್ 11 ಕೊನೆಯ ದಿನವಾಗಿದೆ.

ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ/ಕಂದಾಯರಶೀದಿ/ಖಾತೆ ಪುಸ್ತಕ/ ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಸಾಮಾನ್ಯ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು. ವಿಮೆ ಮಾಡಿಸುವ ರೈತರು FRUITS ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸ ಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ಕಂಪನಿಯು ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ.

ಹೆಚ್ಚಿನ ಮಾಹಿತಿಗೆ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಚೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೇವನಹಳ್ಳಿ- 9480461234. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದೊಡ್ಡಬಳ್ಳಾಪುರ-9482129648, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹೊಸಕೋಟೆ-9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ನೆಲಮಂಗಲ-9880461607 ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!