ತೋಟದ ಮನೆ ಬಳಿ ಇದ್ದ ನಾಯಿಯನ್ನ ಹೊಂಚುಹಾಕಿ ಹೊತ್ತೊಯ್ದ ಚಿರತೆ: ದೃಶ್ಯ‌ ಸಿಸಿಟಿವಿಯಲ್ಲಿ‌ ಸೆರೆ

ತೋಟದ ಮನೆ ಬಳಿ ಇದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಅಕ್ಕತಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೊಂಚುಹಾಕಿ ನಾಯಿಯ ಕುತ್ತಿಗೆಗೆ ಬಾಯಿ ಹಾಕಿ ಹೊತ್ತೊಯ್ಯುತ್ತಿರುವ ದೃಶ್ಯ ಮನೆ ಬಳಿ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆ ಫೆ.18ರ ರಾತ್ರಿ 1:40ರ ಸಮಯದಲ್ಲಿ ನಡೆದಿದೆ. ತೋಟದ ಮನೆ ಮಾಲೀಕ ಬೆಂಗಳೂರಿನಲ್ಲಿರುತ್ತಾರೆ. ಇಂದು ತೋಟ ನೋಡಲೆಂದು ತೋಟದ ಮನೆಗೆ ಬಂದಾಗ ನಾಯಿ ನಾಪತ್ತೆಯಾಗಿರುವುದು ಕಂಡುಬಂದಿದೆ. ಕೂಡಲೇ ಸಿಸಿಟಿವಿಯನ್ನು ಪರಿಶೀಲಿಸಿದಾಗ ಚಿರತೆ ಹೊತ್ತೊಯ್ಯುತ್ತಿರುವ ದೃಶ್ಯ ಕಂಡುಬಂದಿದೆ.

ಇತ್ತೀಚೆಗೆ ತಾಲೂಕಿನಲ್ಲಿ ಚಿರತೆಗಳ ಉಪಟಳ ಹೆಚ್ಚಾಗಿದೆ. ಕೆಲ ದಿನಗಳ ಹಿಂದೆ ಸೂಲುಕುಂಟೆಯಲ್ಲಿ ಹೆಣ್ಣು ಚಿರತೆ ಬೋನಿಗೆ ಬಿದ್ದಿತ್ತು. ಆ ಭಾಗದ ಜನ ನಿಟ್ಟುಸಿರು ಬಿಟ್ಟಿದ್ದರು. ಈಗ ಅಕ್ಕತಮ್ಮನಹಳ್ಳಿ ಗ್ರಾಮದಲ್ಲಿ ಚಿರತೆ ಕಾಟದಿಂದ ಆತಂಕ ಮನೆ ಮಾಡಿದೆ.

ಆದಷ್ಟು ಬೇಗ ಚಿರತೆಯನ್ನ ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

7 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

7 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

10 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

18 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

20 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago