ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿಯ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಖಾಸಗಿ ಕಂಪನಿಯೊಂದು ತ್ಯಾಜ್ಯ ವಸ್ತುಗಳಿಂದ ತಯಾರಿಸಿರುವ ಸಿದ್ಧ ಸಮುದಾಯ ಶೌಚಾಲಯಗಳನ್ನು ಪರಿಶೀಲಿಸಿ, ಅನುಷ್ಠಾನಗೊಳಿಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ತದನಂತರ ನಗರದ ಎಸ್.ಟಿ.ಪಿ. ಮತ್ತು ಯು.ಜಿ.ಡಿ.ಯ ಚರಂಡಿಯ ಕಲುಷಿತ ನೀರು ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ ಗ್ರಾಮಗಳ ಕೆರೆಗಳಿಗೆ ಸೇರುತ್ತಿದ್ದು ತುರ್ತಾಗಿ ಈ ಸಮಸ್ಯೆಯನ್ನು ಪರಿಹರಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಸಚಿವರಿಗೆ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಪವನ್ ಕುಮಾರ್ ಮಾಲಪಾಟಿ, ಪಂಚಾಯತ್ ರಾಜ್ ಆಯುಕ್ತರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ,ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಆಯುಕ್ತಾಲಯದ ಅಧಿಕಾರಿಗಳು ಮತ್ತು ಇನ್ನಿತರ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.