ತ್ಯಾಜ್ಯ ವಸ್ತು‌ ಬಳಸಿ ಸಿದ್ಧ ಸಮುದಾಯ ಶೌಚಾಲಯ ತಯಾರಿಕೆ: ಸಚಿವ ಪ್ರಿಯಾಂಕ್‌ ಖರ್ಗೆ ಪರಿಶೀಲನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿಯ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಖಾಸಗಿ ಕಂಪನಿಯೊಂದು ತ್ಯಾಜ್ಯ ವಸ್ತುಗಳಿಂದ ತಯಾರಿಸಿರುವ ಸಿದ್ಧ  ಸಮುದಾಯ ಶೌಚಾಲಯಗಳನ್ನು ಪರಿಶೀಲಿಸಿ, ಅನುಷ್ಠಾನಗೊಳಿಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ತದನಂತರ ನಗರದ ಎಸ್.ಟಿ.ಪಿ. ಮತ್ತು ಯು.ಜಿ.ಡಿ.ಯ ಚರಂಡಿಯ ಕಲುಷಿತ ನೀರು ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ ಗ್ರಾಮಗಳ ಕೆರೆಗಳಿಗೆ ಸೇರುತ್ತಿದ್ದು ತುರ್ತಾಗಿ ಈ ಸಮಸ್ಯೆಯನ್ನು ಪರಿಹರಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಸಚಿವರಿಗೆ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಪವನ್ ಕುಮಾರ್ ಮಾಲಪಾಟಿ, ಪಂಚಾಯತ್‌ ರಾಜ್‌ ಆಯುಕ್ತರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್‌.ಅನುರಾಧ ,ಉಪ ಕಾರ್ಯದರ್ಶಿ ಟಿ.ಕೆ.ರಮೇಶ್‌, ಆಯುಕ್ತಾಲಯದ ಅಧಿಕಾರಿಗಳು ಮತ್ತು ಇನ್ನಿತರ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

7 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago