ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಎನ್.ಜಿ.ಟಿ ಆದೇಶ ಪಾಲನೆ, ಅಪೇರಲ್ ಪಾರ್ಕ್ ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಕೆರೆಗಳಿಗೆ ತ್ಯಾಜ್ಯ ನೀರು ಬಿಡುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ. ಕಾರ್ಖಾನೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಇದ್ದಲ್ಲಿ ಯಾವುದೇ ತ್ಯಾಜ್ಯ ಹೊರಗಡೆ ಬಿಡುವ ಅವಶ್ಯಕತೆ ಇಲ್ಲ. ಹಲವು ಕಾರ್ಖಾನೆಗಳು ಇದನ್ನು ಪಾಲನೆ ಮಾಡುತ್ತಿಲ್ಲ.

ಅಪೇರಲ್ ಪಾರ್ಕ್ ನಲ್ಲಿ ಸುಮಾರು 2 ರಿಂದ 3 ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಶೌಚಾಲಯ, ಕೊಳಚೆ ನೀರು ನೇರವಾಗಿ ಕೆರೆಗಳಿಗೆ, ಕಾಲುವೆಗಳಿಗೆ ಸೇರುತ್ತಿವೆ. ಕಾರ್ಖಾನೆಗಳಲ್ಲಿ ಸರಿಯಾಗಿ ಘನತ್ಯಾಜ್ಯ ನಿರ್ವಹಣೆ ಆಗುತ್ತಿಲ್ಲ ಎಂದರು.

ಗಾರ್ಮೆಂಟ್ಸ್ ಹಾಗೂ ಸಿದ್ದ ಉಡುಪು ತಯಾರಿಕಾ ಘಟಕಗಳಲ್ಲಿ ಕೆಮಿಕಲ್ ಮಿಶ್ರಿತ ಬಣ್ಣದ ನೀರು ಬಳಸಿ ಬಟ್ಟೆ ಸಿದ್ದ ಪಡಿಸುವವರು. ಬಟ್ಟೆ ಸಿದ್ಧವಾದ ನಂತರ ತ್ಯಾಜ್ಯ ನೀರನ್ನು ಹೊರಗೆ ಬಿಡುತ್ತಿದ್ದಾರೆ. ಆ ತ್ಯಾಜ್ಯ ನೀರನ್ನು ಕೂಡ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಇದರ ಜೊತೆಗೆ ಒಳಚರಂಡಿ ವ್ಯವಸ್ಥೆ ಆಗಬೇಕಿದೆ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಕಾರ್ಖಾನೆ, ಕೈಗಾರಿಕೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ ಅಲ್ಲಿಯೇ ವಿಲೇವಾರಿ ಮಾಡಿಕೊಳ್ಳಬೇಕು ಎಂದರು. ಯಾವುದೇ ಕಾರಣಕ್ಕೂ ಹೊರಗೆ ಬರಬಾರದು.

ಕಾರ್ಖಾನೆಗಳ ತ್ಯಾಜ್ಯದಿಂದ ದೊಡ್ಡಬಳ್ಳಾಪುರದ ನಾಗರಕೆರೆ, ಚಿಕ್ಕ ತುಮಕೂರು ಕೆರೆ, ದೊಡ್ಡ ತುಮಕೂರು, ಮಜರಾ ಹೊಸಹಳ್ಳಿ ಕೆರೆಗಳು ಕಲುಷಿತಗೊಂಡು ಸುತ್ತಮುತ್ತಲಿನ ಹಳ್ಳಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಕುಡಿಯುವ ನೀರಿಗೆ ಯೋಗ್ಯವಿಲ್ಲ, ಕೊಳವೆ ಬಾವಿಗಳಲ್ಲಿ ನೀರು ಕಲುಷಿತಗೊಂಡಿದೆ ಎಂದು ಸುತ್ತಮುತ್ತಲಿನ ರೈತರು, ಪ್ರಗತಿ ಪರ ಚಿಂತಕರು ಅನೇಕ ಬಾರಿ ತಿಳಿಸಿದ್ದಾರೆ. ಈ ರೀತಿಯ ವಾತಾವರಣ ಬೇರೆ ಕೆರೆಗಳಿಗೂ ಆಗಬಾರದು. ಶಾಶ್ವತವಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಕೊಳಚೆ ನೀರು ಸಂಸ್ಕರಣಾ ಘಟಕ, ಘನತ್ಯಾಜ್ಯ ನಿರ್ವಹಣೆ, ಸಾಮಾನ್ಯ ಸಂಸ್ಕರಣಾ ಘಟಕ, ಪರಿಸರ ಸ್ಥಾವರಗಳನ್ನು ಅಳವಡಿಸಿಕೊಳ್ಳದ ಕಾರ್ಖಾನೆಗಳ ಮೇಲೆಯು ಕೂಡ ಕ್ರಮ ಜರುಗಿಸಲಾಗುವುದು ಎಂದರು.

ಕಾರ್ಖಾನೆ, ಕೈಗಾರಿಕೆಗಳು ಕೂಡ ಸಾಕಷ್ಟು ಉದ್ಯೋಗ ನೀಡಿ ಹಲವರಿಗೆ ಜೀವನೋಪಾಯ ಕಲ್ಪಿಸಿದೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್)ಯ ಮೂಲಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿವೆ. ಹಾಗಾಗಿ ಕೈಗಾರಿಕೆಗಳಿಂದ ಯಾವುದೇ ತಪ್ಪಾಗಬಾರದು ಎಂದರು.

ಕಾರ್ಖಾನೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಅನಧಿಕೃತವಾಗಿ, ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಸುರಿದರೆ ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ರಮೇಶ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ರೈತ ಸಂಘದ ಕಾರ್ಯಕರ್ತರು ಹಾಗೂ ಪರಿಸರ ಹೋರಾಟಗಾರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

12 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

14 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

14 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

23 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

1 day ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

1 day ago