Categories: ರಾಜ್ಯ

ತ.ನಾಡಿಗೆ ಮುಂದಿನ 15ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ: ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ- ಮಾಜಿ ಸಿಎಂ‌ ಹೆಚ್ ಡಿಕೆ

ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದಿದ್ದಾರೆ.

ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದು ಹೇಳಿದ್ದಾರೆ.

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇದೆ ಎಂದು ಕಿಡಿಕಾರಿದ್ದಾರೆ.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

10 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

11 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

14 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

19 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

22 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago