ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು ಟಿ- ಟ್ವೆಂಟಿ ಸರಣಿಗೆ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಅಂಜಿಕ್ಯಾ ರಹಾನೆಯನ್ನು ಕೈಬಿಟ್ಟು ಬುಮ್ರಾಗೆ ಉಪನಾಯಕತ್ವ ವಹಿಸಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಟಿ- ಟ್ವೆಂಟಿ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ಪಡೆಯನ್ನು ಪ್ರಕಟಿಸಿದ್ದು ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಉಪನಾಯಕನಾಗಿದ್ದಾರೆ.
ವಿಶ್ವಕಪ್ ನಲ್ಲಿ ಸ್ಥಾನ ಪಡೆಯದ ಸ್ಪಿನ್ನರ್ ಯಜುವೇಂದ್ರ ಚಹಲ್, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದು ಅಭಿಮಾನಿಗಳಲ್ಲಿ ಸಂತಸ ಹೆಚ್ಚಿಸಿದೆ, ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಟಿ -ಟ್ವೆಂಟಿ ಸರಣಿಯಲ್ಲಿ ಶತಕ ಸಿಡಿಸಿದ್ದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮೂರು ಮಾದರಿಯಲ್ಲಿ ಸ್ಥಾನ ಪಡೆದಿದ್ದಾರೆ.
ಟೆಸ್ಟ್ ತಂಡ :- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಠಾಕೂರ್, ಮೊಹಮ್ಮದ್ ಶಮಿ, ಸಿರಾಜ್, ಮುಖೇಶ್ ಕುಮಾರ್, ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ
ಏಕದಿನ ತಂಡ:- ಕೆ.ಎಲ್. ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಸಾಯಿ ಸುದಶ೯ನ್, ತಿಲಕ್ ವಮಾ೯, ರಜತ್ ಪಾಟಿದರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ವಿ.ಕೀ) ಅಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಚಹಲ್, ಮುಖೇಶ್ ಕುಮಾರ್, ಆವೇಶ್ ಖಾನ್, ಅಷ್೯ದೀಪ್, ದೀಪಕ್ ಚಹರ್
ಟಿ- ಟ್ವೆಂಟಿ ತಂಡ:- ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವಮಾ೯, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ (ಉಪ ನಾಯಕ), ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅಶ೯ದೀಪ್ ಸಿಂಗ್, ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್