ದಕ್ಷಿಣ ಇಥಿಯೋಪಿಯಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ 66ಮಂದಿ ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ. ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಿದಾಮಾ ಆರೋಗ್ಯ ಬ್ಯೂರೋ, ಕಾರು ಅಪಘಾತ ಒಂದರಲ್ಲಿ 66 ಮಂದಿ ಮೃತಪಟ್ಟಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೋನಾ ಜನರಲ್ ಹಾಸ್ಪಿಟಲ್ಗೆ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿಸಲಾಗಿದೆ.
ದಕ್ಷಿಣ ಇಥಿಯೋಪಿಯಾದ ಪೂರ್ವ ವಲಯದ ಗೆಲಾನಾ ಸೇತುವೆಯಲ್ಲಿ ಈ ದುರಂತ ಸಂಭವಿಸಿದ್ದು, ನೀರಿನಲ್ಲಿ ಮುಳುಗಿರುವ ಕಾರು ಹಾಗೂ ಜನರನ್ನು ಅಧಿಕಾರಿಗಳು ಹೊರತೆಗೆದಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.