ನೆಲಮಂಗಲ ತಾಲೂಕಿನಲ್ಲಿರುವ ದಕ್ಷಿಣ ಕಾಶಿಯಂದೇ ಕರೆಯಲ್ಪಡುವ ಶಿವಗಂಗೆಯಲ್ಲಿ ಪ್ರತಿ ವರ್ಷದ ಮಕರ ಸಂಕ್ರಾತಿಯಂದು ತೀರ್ಥೋದ್ಭವವಾಗಿದೆ. ಬೆಟ್ಟದ ತುತ್ತತುದಿ ಸುಮಾರು 4,547 ಅಡಿ ಮೇಲೆ ಇಂದು ಬೆಳಿಗ್ಗೆ 8.25 ಗಂಟೆಗೆ ಗಂಗೋತ್ಪತ್ತಿಯಾಗಿದ್ದು, ಪ್ರಕೃತಿಕ ವಿಸ್ಮಯವನ್ನ ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಶಿವಗಂಗೆ ಕ್ಷೇತ್ರದಲ್ಲಿ ಪ್ರತಿವರ್ಷ ಮಕರ ಸಂಕ್ರಮಣದಂದು ನಡೆಯುವ ಗಂಗಾಧರೇಶ್ವರ ಸ್ವಾಮಿಯ ಗಿರಿಜಾ ಕಲ್ಯಾಣ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ತೀರ್ಥೋದ್ಭವವಾದ ತೀರ್ಥ ತಂದು ಗಿರಿಜಾ ಕಲ್ಯಾಣವನ್ನು ನೆರವೇರಿಸಲಾಯಿತು.
ಒಬ್ಬರು ಡಿವೈಎಸ್ಪಿ, ನಾಲ್ವರು ಅರಕ್ಷಕ ನಿರೀಕ್ಷಕರು, 8 ಮಂದಿ ಅರಕ್ಷಕ ಉಪನಿರೀಕ್ಷಕರು ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.
ಗಿರಿಜಾ ಕಲ್ಯಾಣ ಮಹೋತ್ಸವದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಸ್ಥಳೀಯ ಶಾಸಕ ಎನ್.ಶ್ರೀನಿವಾಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ವಿದ್ಯಾರ್ಥಿ ಮತ್ತು ಶಿಕ್ಷಕನ ಬಾಂಧವ್ಯ, ಸರ್ಕಾರಿ ಶಾಲೆಗಳ ಇಂದಿನ ಸ್ಥಿತಿಗತಿ ಮೊದಲಾದ ಅಂಶಗಳು ಒಳಗೊಂಡಿರುವ 'ನನ್ನ ಶಾಲೆಯನ್ನು ಪ್ರೀತಿಸುತ್ತೇನೆ' ಎಂಬ…
ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…