ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಅವಘಡ; ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ತಾಲ್ಲೂಕಿನ ಹೊನ್ನಾಘಟ್ಟ ಗ್ರಾಮದಲ್ಲಿ ಕಳೆದ ಮಾ.21ರ ಮಂಗಳವಾರ ಸಂಜೆ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಒಂದು ಲಕ್ಷ ರೂಪಾಯಿ ಬೆಲೆ ಬಾಳುವ ಎರಡು ಹಸುಗಳು ಸುಟ್ಟು ಭಸ್ಮವಾಗಿದ್ದವು, ಬೆಂಕಿ ನಂದಿಸಲು ಪ್ರಯತ್ನಪಟ್ಟಿದ್ದ ಕೊಟ್ಟಿಗೆಯ ಮಾಲೀಕ ಮುನಿಹನುಮಯ್ಯ ಅವರಿಗೆ ಬೆಂಕಿ ಅವಘಡದಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿತ್ತು. ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಐದು ದಿನಗಳ ನಂತರ ಭಾನುವಾರ ಬೆಳಿಗ್ಗೆ ಮುನಿಹನುಮಯ್ಯ ( 65 ) ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *