ದರೋಡೆ ಮಾಡಲು ಅಪಘಾತ ಮಾಡಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ…
ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ವಿಜಯಲಕ್ದ್ಮಿಗೆ ಬೈಕ್‌ನಿಂದ ಡಿಕ್ಕಿ ಹೊಡೆದು ಗಾಯಗೊಳಿಸಿದ ಆರೋಪ ಕೇಳಿ ಬಂದಿತ್ತು. ಏಪ್ರಿಲ್ 20ರಂದು ಅಪಘಾತ ಪ್ರಕರಣ ವಿಜಯನಗರ ಟ್ರಾಫಿಕ್ ಠಾಣೆಯಲ್ಲಿ ದಾಖಲಾಗಿತ್ತು. ಗಾಯಗೊಂಡಿದ್ದ ಮಹಿಳೆ ಏಪ್ರಿಲ್ 27ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ತನಿಖೆಯಲ್ಲಿ ಮನೆ ದರೋಡೆ ಮತ್ತು ಚಿನ್ನಾಭರಣ ಕಳವು ಸಂಚು ಬಯಲಾಗಿದೆ. ಪ್ರಕರಣಕ್ಕೆ ಕೊಲೆ ಮತ್ತು ಮನೆ ಕಳವು ಸೆಕ್ಷನ್ ಸೇರಿಸಿ ತನಿಖೆ ಮುಂದುವರಿಸಲಾಗಿದೆ..
ಪ್ರಕರಣದ ಒಬ್ಬ ಆರೋಪಿಯನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಮೇ 2ರಂದು ಆರೋಪಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೇ 5ರಂದು ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಮಂಜುನಾಥ್ ಸಹ ಸಾವನ್ನಪ್ಪಿದ್ದಾನೆ.
ಮೃತ ಆರೋಪಿ ಮಂಜುನಾಥ ವಿರುದ್ಧ ವಿವಿಧ ಠಾಣೆಗಳಲ್ಲಿ ಒಟ್ಟು 6 ಪ್ರಕರಣ ದಾಖಲಾಗಿತ್ತು.
ಶೇಷಾದ್ರಿಪುರಂ ಠಾಣೆಯಲ್ಲಿ ರೌಡಿಶೀಟ್ ಓಪನ್ ಆಗಿದ್ದ ಆರೋಪಿಗೆ ದೀರ್ಘಕಾಲದ ಅನಾರೋಗ್ಯ ಹಿನ್ನೆಲೆ ಪೊಲೀಸ್ ಕಸ್ಟಡಿಯಲ್ಲಿ ಅನಾರೋಗ್ಯದಿಂದಲೇ ಆರೋಪಿಯ ಸಾವು ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…