ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ಗೆ ಜಾಮೀನು ನೀಡಿ ಹೈಕೋರ್ಟ್ ಕಳೆದ ವರ್ಷ ಆದೇಶ ನೀಡಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.