ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ಪಂಚಾಯಿತಿ ವಿರುದ್ಧ ದಲಿತರು ಸಿಡಿದ್ದೆದ್ದಿದ್ದಾರೆ.

ದಲಿತರು ದಲಿತ ಕಾಲೋನಿಗಳಲ್ಲಿ ರಸ್ತೆ ನಿರ್ಮಾಣ ಚರಂಡಿ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳನ್ನು ಮಾಡುವಾಗ ಸಾಮಾನ್ಯವಾಗಿ ನಿರ್ಲಕ್ಷ್ಯ, ಅವೈಜ್ಞಾನಿಕ ನಿರ್ಮಾಣ, ಮತ್ತು ಕಳಪೆ ನಿರ್ವಹಣೆಯಿಂದ ಉಂಟಾಗುತ್ತವೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿದ್ದರೆ ನೀರು ನಿಲ್ಲುವುದು, ದುರ್ವಾಸನೆ ಬರುವುದು ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆ ಉಂಟಾಗುತ್ತಿದೆ. ಇದಕ್ಕೆ ಪರಿಹಾರವಾಗಿ, ಸಂಬಂಧಪಟ್ಟ ಅಧಿಕಾರಿಗಳು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು, ಸರಿಯಾದ ನಿರ್ವಹಣೆ ಮಾಡಬೇಕು ಮತ್ತು ಅವೈಜ್ಞಾನಿಕ ನಿರ್ಮಾಣಗಳನ್ನು ಸರಿಪಡಿಸಬೇಕು.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕೂಗಳತೆ ದೂರದಲ್ಲಿರುವ ದಲಿತ ಕಾಲೋನಿಯಲ್ಲಿ ಚರಂಡಿ ಇದ್ದು ಇಲ್ಲದಂತಾಗಿದೆ. ಕೊಳಚೆ ನೀರು ಮನೆಯ ಮುಂದೆ ಶೇಖರಣೆಯಾಗಿ, ರಸ್ತೆಯಲ್ಲಿಯೇ ಕೊಳೆತು ಇಡೀ ಪ್ರದೇಶ ದುರ್ನಾತ ಬೀರುತ್ತಿದೆ. ಸೊಳ್ಳೆ, ನೊಣ ಸೇರಿದಂತೆ ಇತರೆ ಕ್ರಿಮಿ ಕೀಟಗಳ ಆವಾಸ ಸ್ಥಾನವಾಗಿದೆ. ಇದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಅದರೆ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಶುಚಿತ್ವದತ್ತ ಸ್ವಲ್ಪವೂ ಗಮನ ಹರಿಸುತ್ತಿಲ್ಲ ಎಂದು ಕಾಲೋನಿ ನಿವಾಸಿಗಳು ದೂರಿದ್ದಾರೆ.

ಕರ್ನಾಟಕ ಭೀಮ ಸೇನೆ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಮಾತನಾಡಿ, ಹಾಡೋನಹಳ್ಳಿಯಲ್ಲಿ ದಲಿತರು ವಾಸಿಸುವ ಕಾಲೋನಿಯ ಅಭಿವೃದ್ಧಿಯತ್ತ ಸಂಬಂಧಪಟ್ಟವರು(ಗ್ರಾಮ ಪಂಚಾಯಿತಿ) ನಿರ್ಲಕ್ಷ್ಯ ತಾಳುತ್ತಲೇ ಬರುತ್ತಿದ್ದಾರೆ. 85ಕ್ಕೂ ಹೆಚ್ಚು ಕುಟುಂಬಗಳು ದಲಿತ ಕಾಲೋನಿಯಲ್ಲಿ ವಾಸ ಮಾಡಲಾಗುತ್ತಿದೆ. ನಾವು ವಾಸ ಮಾಡುತ್ತಿರುವ ಕಾಲೋನಿಯಲ್ಲಿ ಚರಂಡಿ ಸಮಸ್ಯೆ ಎದ್ದು ಕಾಣುತ್ತಿದೆ.‌ ಚರಂಡಿ ಸ್ವಚ್ಛತೆ ಮಾಡಿ ಸುಮಾರು ವರ್ಷಗಳೇ ಕಳೆದಿವೆ.‌ ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲೇ ಇರುವ ಕಾಲೋನಿಗೆ ಸಂಬಂಧಪಟ್ಟವರು ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಅಸ್ಪೃಶ್ಯತೆ ಆಚರಣೆ ಮಾಡುತ್ತಿದ್ದಾರೆ. 15-20 ಅಡಿ ಜಾಗದ ಮನೆಗಳಲ್ಲಿ ದಲಿತರು ವಾಸ ಮಾಡುತ್ತಿದ್ದಾರೆ. ಮೂಲಭೂತ ಸೌಕರ್ಯ ಒದಗಿಸುವಂತೆ ಸಚಿವರು, ಶಾಸಕರು, ಜಿಲ್ಲಾಧಿಕಾರಿ, ಜಿ‌ಪಂ ಸಿಇಒ, ತಾಪಂ ಸಿಇಒ, ಗ್ರಾಮ ಪಂಚಾಯಿತಿ ಪಿಡಿಒ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಆದರೆ ಯಾವ ಕೆಲಸವಾಗಿಲ್ಲ. ಸರ್ಕಾರಿ ಅಧಿಕಾರಿಗಳು ಯಾರ ಕೈಗೊಂಬೆಯಾಗದೇ, ಯಾರ ಒತ್ತಡಕ್ಕೂ ಮಣಿಯದೇ ಸಂವಿಧಾನ ಅಡಿಯಲ್ಲಿ ಕೆಲಸ ಮಾಡಬೇಕು. ಕೂಡಲೇ ಚರಂಡಿ ದುರಸ್ತಿ ಮಾಡಿ, ಕಾಲೋನಿಯಲ್ಲಿ ಕಾಲಕಾಲಕ್ಕೆ ಸ್ವಚ್ಛತಾ ಕಾರ್ಯಕೈಗೊಳ್ಳಬೇಕು. ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾಲೋನಿ ನಿವಾಸಿ ಮುರುಳಿ ಮಾತನಾಡಿ, ಹಾಡೋನಹಳ್ಳಿಯ ಜನತಾ ಕಾಲೋನಿಯಲ್ಲಿ ಸುಮಾರು 50 ವರ್ಷಗಳಿಂದ ವಾಸವಿದ್ದೇವೆ. ಕಾಲೋನಿಯಾದಗಿನಿಂದಲೂ ಮೂಲಭೂತ ಸೌಲಭ್ಯಗಳಿಲ್ಲ. ಈ ಕುರಿತು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವ ಉಪಯೋಗವಾಗಿಲ್ಲ.‌ ನಾವು ದಲಿತರು ಎಂಬ ಕಾರಣಕ್ಕೆ ಗ್ರಾಮ ಪಂಚಾಯಿತಿಯವರು ನಮ್ಮನ್ನು ಎಲ್ಲಾ ವಿಚಾರದಲ್ಲಿ ಕಡೆಗಣಿಸುತ್ತಲೇ ಬರುತ್ತಿದ್ದಾರೆ. ಪಂಚಾಯಿತಿ ಪಿಎಒಗಳು ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಾರೆ. ನಮಗೆ ಮೂಲಭೂತ ಸವಲತ್ತುಗಳನ್ನು ಒದಗಿಸದೇ ಇದ್ದಲ್ಲಿ ಮುಂಬುರುವ ತಾ.ಪಂ, ಜಿ.ಪಂ ಸೇರಿದಂತೆ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿಸಿದರು.

ಕಾಲೋನಿ‌ ನಿವಾಸಿ ಲಲಿತಾ ಮಾತನಾಡಿ, ನಮ್ಮ ಕಾಲೋನಿಯಲ್ಲಿ ಮೋರಿ, ಚರಂಡಿ, ವಿದ್ಯುತ್ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳು ಇಲ್ಲ. ಶೌಚಾಲಯಗಳು ಇಲ್ಲ. 10ಅಡಿ ಜಾಗದಲ್ಲಿ ಮನೆಗಳಿವೆ. ಮನೆಗಳಲ್ಲಿ ಮೂರು ಜನ ಮೇಲೆ ವಾಸ ಮಾಡುವದಕ್ಕೆ ಆಗಲ್ಲ. ಒಟ್ಟು ಕುಟುಂಬದಲ್ಲಿ ಮನೆಯಲ್ಲಿ ಜಾಗ ಇಲ್ಲದ ಕಾರಣ ವಿಧಿ ಇಲ್ಲದೇ ಬೇರೆಕಡೆ ಬಾಡಿಗೆ ಮನೆ ಮಾಡಿಕೊಂಡು ವಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು…

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

3 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

8 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

8 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

16 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago