ದಲಿತ ನಾಯಕ ಡಾ.ಬಾಬು ಜಗಜೀವನ್ ರಾಂ ಅವರಿಗೆ ತಾಲೂಕು ಆಡಳಿತದಿಂದ ಅಗೌರವ; ಪುತ್ಥಳಿ ಬಳಿ ಸ್ವಚ್ಛತೆ ಮರೀಚಿಕೆ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ದಲಿತ ಮುಖಂಡರ ಆಕ್ರೋಶ: ಅಧಿಕಾರಿಗಳಿಗೆ ಶಾಸಕ ತರಾಟೆ

ಇಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 36ನೇ ಪುಣ್ಯಸ್ಮರಣೆ ದಿನ. ಪುತ್ಥಳಿಯನ್ನ ಸ್ವಚ್ಚ ಮಾಡದೆ ದೊಡ್ಡಬಳ್ಳಾಪುರ ನಗರಸಭೆ ಆಡಳಿತ, ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದಾರೆ, ಇದರಿಂದ ಬೇಸರಗೊಂಡ ಶಾಸಕ ಧೀರಜ್ ಮುನಿರಾಜು ಅವರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣದ ಟೌನ್ ಹಾಲ್ ಮುಂಭಾಗದಲ್ಲಿ ಡಾ.ಬಾಬು ಜಗಜೀವನ್ ರಾಮ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗಳ ನಿರ್ಮಾಣ ಮಾಡಲಾಗಿದೆ, ಪ್ರತಿವರ್ಷ ಇಬ್ಬರು ನಾಯಕರ ಜಯಂತಿ ಮತ್ತು ಪುಣ್ಯಸ್ಮರಣೆಯ ದಿನದಂದು ಪುತ್ಥಳಿ ಸ್ಥಳವನ್ನ ಸ್ವಚ್ಛತೆ ಮತ್ತು ಹೂವಿನ ಅಲಂಕಾರವನ್ನ ಮಾಡಲಾಗುತ್ತದೆ, ಆದರೆ ಇಂದು ಪುತ್ಥಳಿಗಳ ಸ್ವಚ್ಚತೆಯನ್ನ ನಗರಸಭೆ ಅಧಿಕಾರಿಗಳು ಮಾಡಿಲ್ಲ, ಹೂವಿನ ಅಲಂಕಾರ ಸಹ ಮಾಡಿಲ್ಲ, ಬೆಳಗ್ಗೆ ಬಾಬು ಜಗಜೀವನ್ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಶಾಸಕ ಧೀರಜ್ ಮುನಿರಾಜು ಬಂದಿದ್ದಾರೆ, ಆದರೆ ಸ್ಥಳವನ್ನು ಸ್ವಚ್ಚ ಮಾಡದ ಬಗ್ಗೆ ಬೇಸರಗೊಂಡು ಅಧಿಕಾರಿಗಳಿಗೆ ಪೋನ್ ಮಾಡಿ ತರಾಟೆ ತೆಗೆದುಕೊಂಡರು, ನೋಟಿಸ್ ಕೊಡುವುದಾಗಿ ಎಚ್ಚರಿಕೆಯನ್ನ ಇದೇ ವೇಳೆ ಅಧಿಕಾರಿಗಳಿಗೆ ಕೊಟ್ಟರು.

ಈ ವೇಳೆ ದಲಿತ ಮುಖಂಡ ರಾಜಘಟ್ಟ ಕಾಂತರಾಜು ಮಾತನಾಡಿ, ತಾಲ್ಲೂಕು ಆಡಳಿತ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡುತ್ತಿದೆ. ಆದರೆ ಪುತ್ಥಳಿಯನ್ನು ಸ್ವಚ್ಛಗೊಳಿಸಿಲ್ಲ, ಸುತ್ತಲೂ ಗ್ರೀನ್ ಮ್ಯಾಟ್ ಹಾಕಿಲ್ಲ ಹೂವಿನ ಅಲಂಕಾರ ಮಾಡಿಲ್ಲ. ಕಾಟಾಚಾರಕ್ಕೆ ಆಚರಣೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮತ್ತೊಬ್ಬ ಮುಖಂಡ ಮುನಿಸುಬ್ಬಯ್ಯ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಎಂದೂ ಈ ರೀತಿಯ ಅವ್ಯವಸ್ಥೆ ನಡೆದಿರಲಿಲ್ಲ, ಇಂದು ಅಧಿಕಾರಿಗಳಿಗೆ ಮಾಲಾರ್ಪಣೆ ಮಾಡಲು ಬಿಡುತ್ತಿರಲಿಲ್ಲ, ನಮ್ಮದೇ ಸಮುದಾಯದ ಮುಖಂಡರ ಸ್ಮರಣ ದಿನದಂದು ಗಲಾಟೆ ಮಾಡಬಾರದು ಎಂದು ಸುಮ್ಮನಿದ್ದೇವೆ ಎಂದು ತಿಳಿಸಿದರು.

ಅಧಿಕಾರಿಗಳು ದಲಿತ ಸಂಘಟನೆಗಳ ಮುಖಂಡರಿಗೆ ಒಂಬತ್ತು ಗಂಟೆಗೆ ಮಾಲಾರ್ಪಣಾ ಕಾರ್ಯಕ್ರಮ ಎಂದು ಹೇಳಿದ್ದರು, ಹತ್ತು ಗಂಟೆಯಾದರೂ ಯಾವ ಅಧಿಕಾರಿಗಳೂ ಇತ್ತ ತಲೆ ಹಾಕಿಲ್ಲ, ಮುಂದಿನ ದಿನಗಳಲ್ಲಿ ಅಸಡ್ಡೆ ತೋರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಉಪವಿಭಾಗಾಧಿಕಾರಿ ಶಿವಶಂಕರ್ ಮತ್ತು ತಹಶೀಲ್ದಾರ್ ಮೋಹನಕುಮಾರಿ ಅವರು ಸ್ಥಳಕ್ಕೆ ದೌಡಾಯಿಸಿ ಡಾ.ಬಾಬು ಜಗಜೀವನ್ ರಾಂ ಮತ್ತು ಡಾ‌.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ದೊಡ್ಡತುಮಕೂರು ವೆಂಕಟೇಶ್, ಟಿ.ಡಿ.ಮುನಿಯಪ್ಪ, ರಾಮಾಂಜಿನಿ, ನರಸಪ್ಪ ಕರೀಂ ಸೊಣ್ಣೇನಹಳ್ಳಿ ಮುನಿಯಪ್ಪ, ತಳವಾರ ನಾಗರಾಜು ಮುಂತಾದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

7 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

14 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

1 day ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago