ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಪೂರೈಕೆ ಇಲ್ಲದೆ ತಿರುಮಗೊಂಡನಹಳ್ಳಿ ಗ್ರಾಮಸ್ಥರು ಹಾಗು ಜಾನುವಾರುಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ 150 ಕ್ಕೂ ಹೆಚ್ಚು ಮನೆಗಳಿದ್ದು, ಜಾನುವಾರುಗಳ ಸಂಖ್ಯೆ ಕೂಡ ಹೆಚ್ಚಾಗಿವೆ..
ಗ್ರಾಮದಲ್ಲಿ ಕೇವಲ ಒಂದೇ ಒಂದು ಬೋರ್ ವೆಲ್ ಇದ್ದು, 24 ಗಂಟೆ ವಿದ್ಯುತ್ ಇಲ್ಲದ ನೀಡದ ಕಾರಣ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿದೆ. ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಪ್ರಾರಂಭ ದಿನದಿಂದಲೂ ಕೂಡ ತಿರುಮಗೊಂಡನಹಳ್ಳಿ ಗ್ರಾಮದ ಜನರಿಗೆ ಅನ್ಯಾಯ ಮಾಡುತ್ತಿದ್ದು, ಪಂಚಾಯಿತಿ ವತಿಯಿಂದ ಸಿಗಬೇಕಾದ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.
ರಾಜಕೀಯ ಬಣ್ಣದ ತೇಪೆ ಹಾಕಿ ಗ್ರಾಮಕ್ಕೆ ಸಿಗಬೇಕಾದ ಕನಿಷ್ಠ ಸೌಕರ್ಯಗಳನ್ನು ಕೂಡ ಇವರು ನೀಡುತ್ತಿಲ್ಲ. ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪಂಚಾಯಿತಿ ಪ್ರತಿಭಟನೆ ಮಾಡಿದ್ದರು. ಕೇವಲ ಕಾಟಚಾರಕ್ಕೆ ನೀರನ್ನು ಪೂರೈಕೆ ಮಾಡಿ ಗ್ರಾಮಸ್ಥರು ಕಣ್ಣೊರೆಸುವ ತಂತ್ರ ರೂಪಿಸಿದ್ದರು..
ದಶಕಗಳಿಂದ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವಲ್ಲಿ ವಿಫಲವಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯರುಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಗಾದೆ ನೆನಪಾಗುತ್ತೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ