ದಶಕಗಳಿಂದ ಬಗೆಯರಿಯದ ನೀರಿನ ಸಮಸ್ಯೆ: ಕುಡಿಯಲು ನೀರಿಲ್ಲದೇ ಗ್ರಾಮಸ್ಥರು ಹೈರಾಣು: ನಿರ್ಲಕ್ಷ್ಯ ತೋರಿದ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು..!

ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಪೂರೈಕೆ ಇಲ್ಲದೆ ತಿರುಮಗೊಂಡನಹಳ್ಳಿ ಗ್ರಾಮಸ್ಥರು ಹಾಗು ಜಾನುವಾರುಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ 150 ಕ್ಕೂ ಹೆಚ್ಚು ಮನೆಗಳಿದ್ದು, ಜಾನುವಾರುಗಳ ಸಂಖ್ಯೆ ಕೂಡ ಹೆಚ್ಚಾಗಿವೆ..

ಗ್ರಾಮದಲ್ಲಿ ಕೇವಲ ಒಂದೇ ಒಂದು ಬೋರ್ ವೆಲ್ ಇದ್ದು,  24 ಗಂಟೆ ವಿದ್ಯುತ್ ಇಲ್ಲದ ನೀಡದ ಕಾರಣ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿದೆ. ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಪ್ರಾರಂಭ ದಿನದಿಂದಲೂ ಕೂಡ ತಿರುಮಗೊಂಡನಹಳ್ಳಿ ಗ್ರಾಮದ ಜನರಿಗೆ ಅನ್ಯಾಯ ಮಾಡುತ್ತಿದ್ದು, ಪಂಚಾಯಿತಿ ವತಿಯಿಂದ ಸಿಗಬೇಕಾದ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.

ರಾಜಕೀಯ ಬಣ್ಣದ ತೇಪೆ ಹಾಕಿ ಗ್ರಾಮಕ್ಕೆ ಸಿಗಬೇಕಾದ ಕನಿಷ್ಠ ಸೌಕರ್ಯಗಳನ್ನು ಕೂಡ ಇವರು ನೀಡುತ್ತಿಲ್ಲ. ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪಂಚಾಯಿತಿ  ಪ್ರತಿಭಟನೆ ಮಾಡಿದ್ದರು. ಕೇವಲ ಕಾಟಚಾರಕ್ಕೆ ನೀರನ್ನು ಪೂರೈಕೆ ಮಾಡಿ ಗ್ರಾಮಸ್ಥರು ಕಣ್ಣೊರೆಸುವ ತಂತ್ರ ರೂಪಿಸಿದ್ದರು..

ದಶಕಗಳಿಂದ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವಲ್ಲಿ ವಿಫಲವಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯರುಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಗಾದೆ ನೆನಪಾಗುತ್ತೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

3 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

3 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

11 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 day ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago