ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ನಿಧನ- ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ಸಾವು

ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ನಡೆದಿದೆ.

ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಸಲಗ ಮೇಲೆ ಎರಗಿಬಿದ್ದಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.

ಹಾಸನದ ಸಕಲೇಶಪುರ, ಆಲೂರು, ಬೇಲೂರು ಮತ್ತು ಯಸ್ಲೂರು ವ್ಯಾಪ್ತಿಗಳಲ್ಲಿ ತೊಂದರೆಗೀಡಾದ ಹಾಗೂ ತೊಂದರೆ ಮಾಡುವ ಆನೆಗಳನ್ನು ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು. ಕಾರ್ಯಾಚರಣೆಯ ಸಮಯದಲ್ಲಿ, ಕಾಡಾನೆಯೊಂದು ಅರ್ಜುನನ ಮೇಲೆ ದಾಳಿ ಮಾಡಿತು,‌ ಕಾಡೆನೆ ಕಾಳಗದಲ್ಲಿ ಅರ್ಜುನನ ಹೊಟ್ಟೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿವೆ.  ಕಾಡಾನೆಯು ಇತರ ನಾಲ್ಕು ಜಂಬೋಗಳನ್ನು ಓಡಿಸಿದಾಗ, ಮೂರು ಓಡಿಹೋದವು ಆದರೆ ಅರ್ಜುನನು ನಿಂತು ಹೋರಾಡಿದನು.

ದ್ರೋಣ, ಬಲರಾಮ ಆನೆಗಳು ಅನಾರೋಗ್ಯಕ್ಕೆ ಒಳಗಾದ ನಂತರ ಸೂಕ್ತ ತರಬೇತಿ ನೀಡುವ ಮೂಲಕ 2012 ರಿಂದ 2019 ರವರೆಗೆ ಅರ್ಜುನನಿಗೆ ಅಂಬಾರಿ ಹೊರಲು ಅವಕಾಶ ನೀಡಲಾಗಿತ್ತು.

Leave a Reply

Your email address will not be published. Required fields are marked *