ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ನಡೆದಿದೆ.
ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಸಲಗ ಮೇಲೆ ಎರಗಿಬಿದ್ದಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.
ಹಾಸನದ ಸಕಲೇಶಪುರ, ಆಲೂರು, ಬೇಲೂರು ಮತ್ತು ಯಸ್ಲೂರು ವ್ಯಾಪ್ತಿಗಳಲ್ಲಿ ತೊಂದರೆಗೀಡಾದ ಹಾಗೂ ತೊಂದರೆ ಮಾಡುವ ಆನೆಗಳನ್ನು ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು. ಕಾರ್ಯಾಚರಣೆಯ ಸಮಯದಲ್ಲಿ, ಕಾಡಾನೆಯೊಂದು ಅರ್ಜುನನ ಮೇಲೆ ದಾಳಿ ಮಾಡಿತು, ಕಾಡೆನೆ ಕಾಳಗದಲ್ಲಿ ಅರ್ಜುನನ ಹೊಟ್ಟೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿವೆ. ಕಾಡಾನೆಯು ಇತರ ನಾಲ್ಕು ಜಂಬೋಗಳನ್ನು ಓಡಿಸಿದಾಗ, ಮೂರು ಓಡಿಹೋದವು ಆದರೆ ಅರ್ಜುನನು ನಿಂತು ಹೋರಾಡಿದನು.
ದ್ರೋಣ, ಬಲರಾಮ ಆನೆಗಳು ಅನಾರೋಗ್ಯಕ್ಕೆ ಒಳಗಾದ ನಂತರ ಸೂಕ್ತ ತರಬೇತಿ ನೀಡುವ ಮೂಲಕ 2012 ರಿಂದ 2019 ರವರೆಗೆ ಅರ್ಜುನನಿಗೆ ಅಂಬಾರಿ ಹೊರಲು ಅವಕಾಶ ನೀಡಲಾಗಿತ್ತು.
ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…