Categories: ಮೈಸೂರು

“ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಸೂಕ್ತ ಆಯ್ಕೆ” – ಸಿಎಂ ಸಿದ್ದರಾಮಯ್ಯ

ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕೆಂದು ತೀರ್ಮಾನಿಸಲಾಯಿತು. ಹಿಂದೆಯೂ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟಿಸಿದ್ದಾರೆ. ದಸರಾ ನಾಡ ಹಬ್ಬ, ಸಾಂಸ್ಕೃತಿಕ ಆಚರಣೆಯಾಗಿದೆ. ನಾಡ ಹಬ್ಬವನ್ನು ಇಂಥ ಧರ್ಮದವರೇ ಉದ್ಘಾಟಿಸಬೇಕೆಂದು ಇಲ್ಲ. ನಾಡ ಹಬ್ಬ ಎಲ್ಲರಿಗೂ ಹಬ್ಬವೇ. ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನರಿಗೂ ಇದು ಹಬ್ಬ. ಮಹಾರಾಜರ ಆಡಳಿತ ಇಲ್ಲದಿರುವಾಗ ಹೈದರಾಲಿ, ಟಿಪ್ಪು ಸುಲ್ತಾನ್ ಕೂಡ ದಸರಾ ಆಚರಿಸುತ್ತಿದ್ದರು. ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರು ದಸರಾ ಆಚರಿಸಿದ್ದಾರೆ. ಇದೊಂದು ಧರ್ಮಾತೀತ, ಜಾತ್ಯಾತೀತ ಹಬ್ಬ. ಕರ್ನಾಟಕದಲ್ಲಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿಗಳು ಬಹಳ ಕಡಿಮೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿರುವ ಬಗ್ಗೆ ಧರ್ಮಾಂಧರು ಮಾತ್ರ ಮಾತನಾಡುತ್ತಾರೆ. ಅವರಿಗೆ ಇತಿಹಾಸ ತಿಳಿದಿಲ್ಲ, ಇತಿಹಾಸವನ್ನು ತಿಳಿದುಕೊಳ್ಳುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ರಾಜಕೀಯವಾಗಿ ಮಾತನಾಡುತ್ತಾರೆಯೇ ಹೊರತಾಗಿ ಜಾತ್ಯಾತೀತವಾಗಿ ಮಾತನಾಡುವುದಿಲ್ಲ. ಬಾನು ಮುಷ್ತಾಕ್ ಅವರಿಗೆ ಕನ್ನಡ ತಾಯಿಯ ಬಗ್ಗೆ ಗೌರವ, ಅಭಿಮಾನ, ಪ್ರೀತಿ ಇಲ್ಲದೆ ಇದ್ದರೆ ಕನ್ನಡದಲ್ಲಿ ಬರೆಯುತ್ತಾರೆಯೇ? ಬಿಜೆಪಿಯವರು ಕುಂಟು ನೆಪವನ್ನು ಹುಡುಕುತ್ತಿದ್ದಾರೆ ಎಂದರು.

ಎದೆಯ ಹಣತೆ ಕೃತಿಯನ್ನು ಭಾಷಾಂತರ ಮಾಡಿದ ದೀಪಾ ಭಾಸ್ತಿಯವರನ್ನೂ ನಾವು ಮರೆತಿಲ್ಲ. ಸರ್ಕಾರ ಈಗಾಗಲೇ ದೀಪಾ ಭಾಸ್ತಿ ಹಾಗೂ ಬಾನು ಮುಷ್ತಾಕ್ ಅವರಿಗೆ ತಲಾ ಹತ್ತು ಲಕ್ಷ ರೂ.ಗಳನ್ನು ನೀಡಿ, ಸನ್ಮಾನಿಸಿ, ಗೌರವಿಸಿದ್ದೇವೆ ಎಂದರು.

” ಬಿಜೆಪಿ ಧರ್ಮದ ವಿಚಾರದಲ್ಲಿ ರಾಜಕೀಯ ಮಾಡುವ ಚಾಳಿಗೆ ಬಿದ್ದಿದೆ”

ಬಿಜೆಪಿಯವರು ಧರ್ಮಸ್ಥಳಕ್ಕೆ ಧರ್ಮಯಾತ್ರೆಯ ಹೊಸ ತಂತ್ರ ಹೆಣೆಯುತ್ತಿದ್ದಾರೆ. ಅವರು ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಾರೆ. ಯಾತ್ರೆ ಹೋದರೆ ಹೋಗಲಿ. ಎಸ್.ಐ.ಟಿ ರಚನೆಯನ್ನು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಸತ್ಯ ಹೊರ ಬರಬೇಕೆಂಬ ಕಾರಣದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತಿತ್ತು. ಈ ಸಂದೇಹವನ್ನು ಹೋಗಲಾಡಿಸಲು ಎಸ್.ಐ.ಟಿ ರಚನೆ ಮಾಡಲಾಗಿದೆ ಎಂದು ಹೇಳಿದರು.

ಫೀರ್ಯಾದುದಾರ ನ್ಯಾಯಾಲಯದ ಮುಂದೆ ಹೋಗಿ 164 ಹೇಳಿಕೆಯನ್ನು ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಎಸ್‌ಐಟಿ ರಚಿಸಬೇಕೆಂದು ಒತ್ತಾಯವನ್ನು ಮಾಡಿದ್ದವು. ಬಿಜೆಪಿಯವರು ಕೂಡ ಇದನ್ನು ಸ್ವಾಗತಿಸಿದ್ದರು. ಈಗ ಮಾತ್ರ ರಾಜಕೀಯ ಮಾಡುತ್ತಿದ್ದಾರೆ. ಅವರಿಗೆ ಧರ್ಮದ ವ್ಯಾಖ್ಯಾನವೇ ಗೊತ್ತಿಲ್ಲ ಎಂದರು.

ಧರ್ಮಸ್ಥಳದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕಾದ ಅಗತ್ಯ ಎಲ್ಲಿದೆ? ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನು ಸಿಬಿಐ ಗೆ ಕೊಟ್ಟಿದ್ದಾರೆ? ಎಸ್.ಐ.ಟಿ ಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಸದ್ಯ ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.

“ಸಿನ್ ಗೂಡ್ಸ್ ಮೇಲೆ ಸೆಸ್ ಹಾಕಿ‌ ಜಿಎಸ್‌ಟಿ ನಷ್ಟ ಪರಿಹಾರ ಒದಗಿಸುವಂತೆ ಕೋರಿದ್ದೇವೆ”

ಕೇಂದ್ರ ಸರ್ಕಾರ ಜಿ.ಎಸ್.ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ, ಆದರೆ ಹಣಕಾಸಿನ(Revenue Protection) ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ ಎಂಟು ರಾಜ್ಯಗಳು ದೆಹಲಿಯಲ್ಲಿ ಚರ್ಚೆ ಮಾಡಿದ್ದು, 2.50 ಲಕ್ಷ ಕೋಟಿ ರೂ. ಇಡೀ ರಾಜ್ಯದಲ್ಲಿ ಸಂಗ್ರಹವಾಗುತ್ತದೆ. 15 ಸಾವಿರ ಕೋಟಿ ನಷ್ಟವಾಗಲಿದ್ದು, ಇದು ದೊಡ್ಡ ಮೊತ್ತ ಎಂದರು.

2017 ರಲ್ಲಿ ಜಿಎಸ್‌ಟಿ ಜಾರಿಯಾದಾಗ 5 ವರ್ಷ ಮಾತ್ರ ಪರಿಹಾರ ನೀಡುವುದಾಗಿ ಹೇಳಿದ್ದರು. ಈಗ ಸುಮಾರು 12% ತೆರಿಗೆ ಬೆಳವಣಿಗೆಯಾಗಿದೆ. ಲಕ್ಷುರಿ(ಸಿನ್ ಗೂಡ್ಸ್ ) ವಸ್ತುಗಳಾದ ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಬೆಂಜ್ ಕಾರುಗಳಲ್ಲಿ ಓಡಾಡುವವ ಮೇಲೆ ಸೆಸ್ ಹಾಕಿ ನಮಗೆ ಪರಿಹಾರ ಕೊಡಿ ಎಂದು ಸಲಹೆ ನೀಡಿದ್ದೇವೆ. ಸಚಿವ ಕೃಷ್ಣಭೈರೇಗೌಡ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರೇ ಈಗ ಎಂಟು ರಾಜ್ಯಗಳ ಆರ್ಥಿಕ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಸೆಪ್ಟೆಂಬರ್ 3 ಮತ್ತು 4 ರಂದು ನಡೆಯಲಿರುವ ಸಭೆಯಲ್ಲಿ ಇದನ್ನು ಪ್ರಸ್ತಾಪ ಮಾಡಲಿದ್ದಾರೆ ಎಂದು ಹೇಳಿದರು.

ಜಿಎಸ್‌ಟಿ ವಿಚಾರವಾಗಿ ರಾಜ್ಯದ ಬಿಜೆಪಿಯ ಸಂಸದರು ಎಂದಿಗೂ ಕೇಂದ್ರವನ್ನು ಒತ್ತಾಯಿಸುವುದಿಲ್ಲ. ಕರ್ನಾಟಕಕ್ಕೆ ₹11,950 ಕೋಟಿಗಳು ನಷ್ಟವಾಯಿತು. ಬಿಜೆಪಿ ಸಂಸದರು ಈ ಬಗ್ಗೆ ಮಾತನಾಡಿಯೇ ಇಲ್ಲ. ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದ್ದಾರೆ. ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಯಾವಾಗ ಮಾತನಾಡಿದ್ದಾರೆ? ಧರ್ಮಸ್ಥಳದ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದರು.

ಆಸ್ತಿ ನೋಂದಣಿ ಶುಲ್ಕ ಹೆಚ್ಚಳವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ದಕ್ಷಿಣ ಭಾರತದ ಇತರೆ ರಾಜ್ಯಗಳಿಗೆ ಸಮಾನವಾಗಿ ಶೇಕಡಾ ಒಂದರಷ್ಟನ್ನು ಹೆಚ್ಚಿಸಲಾಗಿದೆ ಎಂದು ಹೇಳಿದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago