Categories: ವೈರಲ್

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದೀಗ ಈ ಜೋಡಿ ತಮ್ಮ ಮದುವೆಯ ಫೋಟೋಗಳನ್ನು ಇನ್‌ಸ್ಟಾಗ್ರಾಂ ಖಾತೆ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ.

ಇದೀಗ ಫೋಟೋ ಹಂಚಿಕೊಂಡ ಬೆನ್ನಲ್ಲೇ ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ಪೋಸ್ಟ್‌ನಲ್ಲೇನಿದೆ?

“ಒಂದು ದಿನ ನಾನು ಆಕೆಯನ್ನು ತುಂಬಾ ಮಿಸ್ ಮಾಡಿಕೊಂಡೆ. ಆಕೆ ನನ್ನ ಜೊತೆಗಿದ್ದರೆ ನನ್ನ ದಿನ ಇನ್ನೂ ಚೆನ್ನಾಗಿರುತ್ತಿತ್ತು, ಅವಳು ಎದುರಿಗೆ ಕುಳಿತಿದ್ದರೆ ನಾನು ಮಾಡುವ ಊಟಕ್ಕೆ ಒಂದು ಅರ್ಥ ಸಿಗುತ್ತಿತ್ತು. ನನ್ನ ಜೀವನಕ್ಕೆ ನೆಮ್ಮದಿ ಮತ್ತು ಮನೆ ಎಂಬ ಭಾವ ನೀಡಲು ಅವಳು ಬೇಕೇ ಎಂದು ನನಗೆ ಅನಿಸುತ್ತಿತ್ತು. ಆದ್ದರಿಂದ ನನ್ನ ಅತ್ಯುತ್ತಮ ಗೆಳತಿಯನ್ನು… ನನ್ನ ಹೆಂಡತಿಯನ್ನಾಗಿ ಮಾಡಿಕೊಂಡೆ. 26.02.2026.” ಎಂದು ಲವ್‌ ಮತ್ತು ಸ್ಮೈಲ್‌ ಇಮೋಜಿಯೊಂದಿಗೆ ಬರೆದುಕೊಂಡು ಗಮನ ಸೆಳೆದಿದ್ದಾರೆ.

ರಶ್ಮಿಕಾ ಮಂದಣ್ಣ ಪೋಸ್ಟ್‌ನಲ್ಲೇನಿದೆ?

ಈಗ ನಿಮಗಾಗಿ ನನ್ನ ಪತಿಯನ್ನು ಪರಿಚಯಿಸುತ್ತಿದ್ದೇನೆ, ಶ್ರೀ ವಿಜಯ್ ದೇವರಕೊಂಡ ನಿಜವಾದ ಪ್ರೀತಿ ಎಂದರೆ ಹೇಗಿರುತ್ತದೆ ಎಂದು ನನಗೆ ಕಲಿಸಿದ ವ್ಯಕ್ತಿ ಇವರು. ಮನಸ್ಸಿನ ನೆಮ್ಮದಿ ಎಂದರೆ ಏನು ಎಂಬುದನ್ನು ನನಗೆ ತೋರಿಸಿಕೊಟ್ಟವರು. ದೊಡ್ಡದಾಗಿ ಕನಸು ಕಾಣುವುದು ತಪ್ಪಲ್ಲ ಎಂದು ಪ್ರತಿದಿನ ನನಗೆ ಹೇಳುತ್ತಾ, ನಾನು ಊಹಿಸಿರುವುದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುವ ಸಾಮರ್ಥ್ಯವನ್ನು ನನಗೆ ನೆನಪಿಸಿ ಸದಾ ಬೆಂಬಲವಾಗಿ ನಿಂತ ವ್ಯಕ್ತಿ,” ಎಂದು ಬರೆದುಕೊಂಡಿದ್ದಾರೆ.

“ನಾನು ಯಾವಾಗಲೂ ಯಾವ ರೀತಿಯ ಹೆಣ್ಣಾಗಬೇಕೆಂದು ಕನಸು ಕಂಡಿದ್ದೆನೋ, ಇಂದು ಅಂತಹವಳೇ ಆಗಿದ್ದೇನೆ. ಯಾಕೆಂದರೆ ನೀನು ಇಂದು ಈ ಮಟ್ಟಕ್ಕೆ ರೂಪಿಸಿದ್ದೀಯ. ನಾನು ನಿಜವಾಗಿಯೂ ಧನ್ಯಳಾಗಿದ್ದೇನೆ. “ವಿಜ್ಜು, ನಿನ್ನ ಮೇಲಿರುವ ನನ್ನ ಭಾವನೆಗಳನ್ನು ವಿವರಿಸಲು ನನಗೆ ಪದಗಳೇ ಸಾಲುವುದಿಲ್ಲ. ಇದನ್ನು ನಾನು ನಿನಗೆ ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇನೆ,” ಎಂದು ಬರೆದುಕೊಂಡಿದ್ದಾರೆ.

ಆದರೆ, ಇದ್ದಕ್ಕಿದ್ದಂತೆ ನನ್ನೆಲ್ಲಾ ಸಾಧನೆಗಳು, ಹೋರಾಟಗಳು, ಸುಖ-ದುಃಖಗಳು, ಸಂಭ್ರಮಗಳು ಮತ್ತು ನನ್ನ ಇಡೀ ಜೀವನ ಇವೆಲ್ಲದಕ್ಕೂ ಈಗ ಒಂದು ಪರಿಪೂರ್ಣ ಅರ್ಥ ಸಿಕ್ಕಂತಿದೆ. ಯಾಕೆಂದರೆ ಈಗ ನೀನು ನನ್ನ ಜೊತೆಗಿದ್ದೀಯಾ. ಇವೆಲ್ಲವನ್ನೂ ಹತ್ತಿರದಿಂದ ನೋಡುತ್ತಾ, ನನ್ನ ಬದುಕಿನ ಅತಿದೊಡ್ಡ ಭಾಗವಾಗಿದ್ದೀಯಾ. ನಿನ್ನ ಪತ್ನಿಯಾಗುತ್ತಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ನಿನ್ನ ಹೆಂಡತಿಯಾಗಲು, ನಿನ್ನ ಹೆಂಡತಿ ಎಂದು ಕರೆಸಿಕೊಳ್ಳಲು ನಾನು ಕಾತರಳಾಗಿದ್ದೇನೆ. ಇದು ಪೂರ್ತಿ ಪಾರ್ಟಿ ಮಾಡುವ ಸಮಯ. ನಾವು ಒಟ್ಟಾಗಿ ಸದಾಕಾಲ ಉತ್ತಮ ಜೀವನ ಮಾಡೋಣ. ಐ ಲವ್ ಯು ಎಂದು ಬರೆದುಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

3 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

8 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

10 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

22 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago