ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅವರ ಮುಂಬರುವ ಚಿತ್ರ ‘ಗೇಮ್ ಚೇಂಜರ್’ ಬಿಡುಗಡೆಗೂ ಮುನ್ನ ಅವರ 256 ಅಡಿಗಳ ಬೃಹತ್ ಕಟೌಟ್ ಅನ್ನು ಭಾನುವಾರ ವಿಜಯವಾಡದಲ್ಲಿ ಅನಾವರಣಗೊಳಿಸಲಾಗಿದೆ.
ನಿರ್ಮಾಪಕ ದಿಲ್ ರಾಜು ಕಟೌಟ್ ನ್ನು ಬಿಡುಗಡೆಗೊಳಿಸಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ನಾನಾ ಮೂಲೆಗಳಿಂದ ಅಭಿಮಾನಿಗಳು ಜಮಾಯಿಸಿದ್ದಾರೆ.
ಇಷ್ಟು ದೊಡ್ಡ ಕಟೌಟ್ ಯಾವ ನಟನಿಗೂ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಅತಿ ದೊಡ್ಡ ಕಟೌಟ್ ನಿರ್ಮಿಸಿ ದಾಖಲೆ ಬರೆಯಲಾಗಿದೆ.
ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಜನವರಿ 10 ರಂದು ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಡಿಸೆಂಬರ್ 29 ರಂದು ವಿಜಯವಾಡದ ವಜ್ರ ಮೈದಾನದಲ್ಲಿ ಸಂಜೆ 4 ಗಂಟೆಗೆ ಅತಿದೊಡ್ಡ ಕಟೌಟ್ ಅನಾವರಣಗೊಳಿಸಲಾಯಿತು.
ಈ ‘ಕಟೌಟ್’ ಭಾರತೀಯ ಚಿತ್ರರಂಗದ ಭಾಗವಾಗಿದ್ದು, ಇದು ಕೇವಲ ಕಟೌಟ್ ಆಗದೆ ಸ್ಟಾರ್ ಹೀರೋಗಳ ಅಭಿಮಾನಿಗಳಿಗೆ ಭಾವನೆಯಾಗಿದೆ. ರಾಮ್ ಚರಣ್ ಅಭಿಮಾನಿಗಳಿಗೆ ನಿಜಕ್ಕೂ ಹೆಮ್ಮೆಯ ಕ್ಷಣವಾಗಿದೆ.
ಜನವರಿ 04 ರಂದು ರಾಜಮಂಡ್ರಿಯಲ್ಲಿ ಗೇಮ್ ಚೇಂಜರ್ ನ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹೀರೋಗಳ ಕಟೌಟ್
ಅಲ್ಲು ಅರ್ಜುನ್ -108 ಅಡಿ ಕಟೌಟ್
ವಿಜಯ್ – 175 ಅಡಿ ಕಟೌಟ್
ಧನುಷ್ ಕಟೌಟ್- 180 ಅಡಿ ಕಟೌಟ್
ಅಜಿತ್ ಕುಮಾರ್-190 ಅಡಿ ಕಟೌಟ್
ಸೂರ್ಯ- 215 ಅಡಿ ಕಟೌಟ್
ಪ್ರಭಾಸ್- 230 ಅಡಿ ಕಟೌಟ್
ಯಶ್- 236 ಅಡಿ ಕಟೌಟ್
ರಾಮ್ ಚರಣ್ -256 ಅಡಿ ಕಟೌಟ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…