ಆಧುನಿಕ ನರ್ಸಿಂಗ್‌ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಅಂಗವಾಗಿ ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವು ಸಮಾಜಕ್ಕೆ ದಾದಿಯರು ನೀಡುವ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ, ಗೌರವಿಸುವ ದಿನವಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು.
ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ದಾದಿಯರ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು..
ಆಸ್ಪತ್ರೆಗಳಲ್ಲಿ ರೋಗಿಗಳ ಪಾಲಿನ ಆಶಾ ಕಿರಣ, ಕುಟುಂಬ ಸದಸ್ಯರಂತೆ ಶುಶ್ರೂಷೆ ಮಾಡುವ ದಾದಿಯರನ್ನು ಸ್ಮರಿಸುವ ಹಾಗೂ ಅವರ ಸೇವಾ ಕೈಂಕರ್ಯಕ್ಕೆ ನಾವೆಲ್ಲರು ಸಲಾಂ ಹೇಳಲೇಬೇಕು ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಷ್ಟೆ ದಾದಿಯರ ಶ್ರಮವೂ ಇದೆ. ರೋಗಿಗಳ ಆರೈಕೆ, ಚಿಕಿತ್ಸೆ ವೇಳೆ ಸಹಕಾರ ಹಾಗೂ ಮಾನಸಿಕ ಧೈರ್ಯ ತುಂಬುವ ಕೆಲಸದಲ್ಲಿ ದಾದಿಯರ ಸೇವೆ ಅಮೂಲ್ಯವಾಗಿದೆ ಎಂದು ತಿಳಿಸಿದರು.
ದಾದಿಯರ ಸೇವೆ, ತ್ಯಾಗ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅವರ ಮಹತ್ವದ ಪಾತ್ರವನ್ನು ಎಲ್ಲರು ಸ್ಮರಿಸಲೇಬೇಕು ಎಂದರು.
ಸಿಎಂಒ ಡಾ.ರಮೇಶ್, ವೈದ್ಯರಾದ ಡಾ.ಮಂಜುನಾಥ್, ಡಾ. ನಿರಾಂಜನ್, ಡಾ.ರಾಜು, ಡಾ. ಗಾಯತ್ರಿ, ಡಾ.ಪರಮೇಶ್ವರ್, ಡಾ.ಸವಿತಾ, ಹಿರಿಯ ಶುಶ್ರೂಷಾಧಿಕಾರಿ ಶೈಲಜಾ, ವಂದನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…