ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳು: ಅಮಾಯಕರ ಜೀವಗಳು ಬಲಿ

ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಅತಿ ವೇಗವಾಗಿ ಸಂಚರಿಸುವ ವಾಹನಗಳ ಅಟ್ಟಹಾಸಕ್ಕೆ ಅಮಾಯಕರ ಜೀವಗಳು ಬಲಿಯಾಗುತ್ತಿವೆ.

ಇಂದು ಸಂಜೆ ಚಿಕ್ಕಬೆಳವಂಗಲ ಸಮೀಪ ಹೆದ್ದಾರಿ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಚಿಕ್ಕಬೆಳವಂಗಲ ನಿವಾಸಿ ರತ್ಮಮ್ಮ (60) ಎಂದು ಗುರುತಿಸಲಾಗಿದೆ.

ದಾಬಸ್ ಪೇಟೆಯಿಂದ ದೊಡ್ಡಬಳ್ಳಾಪುರದ ಕಡೆಗೆ ವೇಗವಾಗಿ ಬರುತ್ತಿದ್ದ ಕಾರು, ಹೆದ್ದಾರಿ ದಾಟುತ್ತಿದ್ದ ರತ್ಮಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹಿಳೆ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಇದೇ ಹೆದ್ದಾರಿಯಲ್ಲಿ ಮೇ 26ರ ಮುಂಜಾನೆ ಮೂಗೇನಹಳ್ಳಿ ಬಾರೆ ಗುಂಡಹಳ್ಳಿ ಕ್ರಾಸ್ ಸಮೀಪ ಹಿಟ್ ಆ್ಯಂಡ್ ರನ್ ಪ್ರಕರಣವೂ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.

ಸತತ ಅಪಘಾತಗಳಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದ್ದು, ಹೆದ್ದಾರಿಯಲ್ಲಿ ವೇಗ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

error: Content is protected !!